Publish Date: Mon, 12 Aug 2019 (11:33 IST)
Updated Date: Mon, 12 Aug 2019 (11:36 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರಿಗೆ ಸಿಎಂ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಹಾಗೇ ಇಂದು ಮಂಗಳೂರು ಭಾಗದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡುತ್ತೇನೆ. ನಾಳೆ ಶಿವಮೊಗ್ಗ ಮತ್ತು ಸಾಗರಕ್ಕೆ ಹೋಗುತ್ತೇನೆ. ಭಾನುವಾರ ಸ್ವತಃ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಪ್ರವಾಹವನ್ನು ವೀಕ್ಷಣೆ ಮಾಡಿದ್ದಾರೆ. ತಕ್ಷಣ 3 ಸಾವಿರ ಕೋಟಿ ರೂ. ಬಿಡುಗಡೆ ಮಾಡಲು ನಾನು ಬೇಡಿಕೆ ಇಟ್ಟಿದ್ದೇನೆ ಎಂದು ತಿಳಿಸಿದ್ದಾರೆ.