Publish Date: Mon, 18 Nov 2019 (19:32 IST)
Updated Date: Mon, 18 Nov 2019 (19:34 IST)
ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಚೂರಿ ಇರಿತ ಪ್ರಕರಣ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿದೆ.
ಪ್ರಕರಣ ಸಂಬಂಧ ಬಲೆ ಬೀಸಿರೋ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ಈ ವರೆಗೆ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಆಗಿರೋ ಘಟನೆಗೆ ಸಿಎಂ ಬಿ.ಎಸ್.ಯಡಿಯೂರಪ್ಪನವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಮೈಸೂರು ಜಿಲ್ಲಾ ಉಸ್ತುವಾರಿ ವಿ.ಸೋಮಣ್ಣರನ್ನು ಕೂಡಲೇ ಮೈಸೂರಿಗೆ ತೆರಳುವಂತೆ ಸೂಚನೆ ನೀಡಿರೋ ಸಿಎಂ, ಘಟನೆ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಹಾಗೂ ಸೇಠ್ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ತನ್ವೀರ್ ಸೇಠ್ ಬೇಗ ಗುಣಮುಖರಾಗಲಿ ಎಂದಿರುವ ಸಿಎಂ, ಅವರ ಚಿಕಿತ್ಸೆಯ ವೆಚ್ಚವನ್ನು ಸರಕಾರವೇ ಭರಿಸಲಿದೆ ಅಂತ ಹೇಳಿದ್ದಾರೆ.