Publish Date: Tue, 29 Jun 2021 (15:26 IST)
Updated Date: Tue, 29 Jun 2021 (10:59 IST)
ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತಾಗಿ ಶಿಕ್ಷಣ ಇಲಾಖೆ ನಮ್ಮ ಜೊತೆಗೆ ಚರ್ಚಿಸಿಲ್ಲ ಎಂದು ಗೊಂದಲವುಂಟು ಮಾಡಿದ ಆರೋಗ್ಯ ಸಚಿವ ಡಾ. ಸುಧಾಕರ್ ಗೆ ಸಿಎಂ ಯಡಿಯೂರಪ್ಪ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.
ಆರೋಗ್ಯ ಸಚಿವರ ಹೇಳಿಕೆಯಿಂದಾಗಿ ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತು ಗೊಂದಲವುಂಟಾಗಿತ್ತು. ಶಿಕ್ಷಣ ಸಚಿವ ಸುರೇಶ್ ಕುಮಾರ್, ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿಯೇ ಜುಲೈ 19 ಮತ್ತು 22 ಕ್ಕೆ ಪರೀಕ್ಷೆ ನಡೆಸಲು ತೀರ್ಮಾನಿಸುವುದಾಗಿ ಹೇಳಿದ್ದರು. ಆದರೆ ಆರೋಗ್ಯ ಸಚಿವ ಸುಧಾಕರ್, ನಮ್ಮೊಂದಿಗೆ ಚರ್ಚಿಸಿಲ್ಲ ಎಂದಿದ್ದರು.
ಈ ಬಗ್ಗೆ ಹೇಳಿಕೆ ನೀಡಿರುವ ಸಿಎಂ ಯಡಿಯೂರಪ್ಪ, ಈಗಾಗಲೇ ನಿಗದಿ ಮಾಡಿರುವ ದಿನಾಂಕಕ್ಕೇ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಶಿಕ್ಷಣ ಸಚಿವರು ನನ್ನೊಂದಿಗೆ ಚರ್ಚಿಸಿಯೇ ನಿರ್ಧಾರ ತೆಗೆದುಕೊಂಡಿದ್ದಾರೆ. ಸಮಗ್ರ ವರದಿ ಆಧರಿಸಿಯೇ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದು ಏಕಪಕ್ಷೀಯ ನಿರ್ಧಾರವಲ್ಲ. ಈ ಬಗ್ಗೆ ಅನಗತ್ಯ ಗೊಂದಲವುಂಟು ಮಾಡುವುದು ಬೇಡ ಎಂದಿದ್ದಾರೆ. ಈ ಮೂಲಕ ಗೊಂದಲದ ಹೇಳಿಕೆ ನೀಡಿದ್ದ ಆರೋಗ್ಯ ಸಚಿವರಿಗೆ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.