ಆರೋಗ್ಯ ಸಚಿವರಿಗೆ ಪರೋಕ್ಷ ಎಚ್ಚರಿಕೆ ಕೊಟ್ಟ ಸಿಎಂ ಯಡಿಯೂರಪ್ಪ

Webdunia
ಮಂಗಳವಾರ, 29 ಜೂನ್ 2021 (15:26 IST)
ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತಾಗಿ ಶಿಕ್ಷಣ ಇಲಾಖೆ ನಮ್ಮ ಜೊತೆಗೆ ಚರ್ಚಿಸಿಲ್ಲ ಎಂದು ಗೊಂದಲವುಂಟು ಮಾಡಿದ ಆರೋಗ್ಯ ಸಚಿವ ಡಾ. ಸುಧಾಕರ್ ಗೆ ಸಿಎಂ ಯಡಿಯೂರಪ್ಪ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.


ಆರೋಗ್ಯ ಸಚಿವರ ಹೇಳಿಕೆಯಿಂದಾಗಿ ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತು ಗೊಂದಲವುಂಟಾಗಿತ್ತು. ಶಿಕ್ಷಣ ಸಚಿವ ಸುರೇಶ್ ಕುಮಾರ್, ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿಯೇ ಜುಲೈ 19 ಮತ್ತು 22 ಕ್ಕೆ ಪರೀಕ್ಷೆ ನಡೆಸಲು ತೀರ್ಮಾನಿಸುವುದಾಗಿ ಹೇಳಿದ್ದರು. ಆದರೆ ಆರೋಗ್ಯ ಸಚಿವ ಸುಧಾಕರ್, ನಮ್ಮೊಂದಿಗೆ ಚರ್ಚಿಸಿಲ್ಲ ಎಂದಿದ್ದರು.

ಈ ಬಗ್ಗೆ ಹೇಳಿಕೆ ನೀಡಿರುವ ಸಿಎಂ ಯಡಿಯೂರಪ್ಪ, ‘ಈಗಾಗಲೇ ನಿಗದಿ ಮಾಡಿರುವ ದಿನಾಂಕಕ್ಕೇ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಶಿಕ್ಷಣ ಸಚಿವರು ನನ್ನೊಂದಿಗೆ ಚರ್ಚಿಸಿಯೇ ನಿರ್ಧಾರ ತೆಗೆದುಕೊಂಡಿದ್ದಾರೆ. ಸಮಗ್ರ ವರದಿ ಆಧರಿಸಿಯೇ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದು ಏಕಪಕ್ಷೀಯ ನಿರ್ಧಾರವಲ್ಲ. ಈ ಬಗ್ಗೆ ಅನಗತ್ಯ ಗೊಂದಲವುಂಟು ಮಾಡುವುದು ಬೇಡ’ ಎಂದಿದ್ದಾರೆ. ಈ ಮೂಲಕ ಗೊಂದಲದ ಹೇಳಿಕೆ ನೀಡಿದ್ದ ಆರೋಗ್ಯ ಸಚಿವರಿಗೆ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿಗೆ 3ನೇ ನೋಟಿಸ್, ಯಾವಾ ಪ್ರಕರಣ ಗೊತ್ತಾ

ಜಾತಿ ಸಮೀಕ್ಷೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಭೆ ಹೈಲೈಟ್ಸ್

ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಜನರ ಮುಂದೆ ಬೆತ್ತಲೆಯಾಗಿದೆ

ಅಯೋದ್ಯೆಯಲ್ಲಿನ ಮುಸ್ಲಿಮರು ಸರಯೂ ನದಿ ದಾಟಿ ವಲಸೆ ಹೋಗಿ: ವಿನಯ್ ಕಟಿಯಾರ್

ದಸರಾ ಹಿನ್ನೆಲೆ ಬೆಂಗಳೂರು ಟು ಮಂಗಳೂರಿಗೆ ವಿಶೇಷ ರೈಲು ಓಡಾಟ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments