Publish Date: Sat, 17 Jul 2021 (09:30 IST)
Updated Date: Sat, 17 Jul 2021 (09:40 IST)
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಬಿಎಸ್ ವೈ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ನಿನ್ನೆ ಪ್ರಧಾನಿ ಮೋದಿ ಭೇಟಿಯಾದಾಗ ಅವರೇ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅದರಂತೆ ಇಂದು ಬೆಳಿಗ್ಗೆ 10.30 ಕ್ಕೆ ನಡ್ಡಾ ಜೊತೆ ಮಾತುಕತೆ ನಡೆಸಲಿದ್ದಾರೆ.
ಇತ್ತೀಚೆಗಷ್ಟೇ ಕೇಂದ್ರ ಸಂಪುಟ ಪುನರಾಚನೆಯಾಗಿದ್ದು, ಹೊಸ ಮಂತ್ರಿಗಳು ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯಕ್ಕೆ ಅನುದಾನ ಪಡೆಯಲು ಹೊಸದಾಗಿ ನೇಮಕವಾಗಿರುವ ಸಚಿವರನ್ನೂ ಯಡಿಯೂರಪ್ಪ ಭೇಟಿಯಾಗುವ ಸಾಧ್ಯತೆಯಿದೆ.