Publish Date: Sat, 05 May 2018 (08:41 IST)
Updated Date: Sat, 05 May 2018 (08:42 IST)
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಪರ ಸ್ಟಾರ್ ಪ್ರಚಾರಕರಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಉತ್ತರ ಪ್ರದೇಶ ಸಿಎಂ ಯೋಗಿ ದಿಡೀರ್ ಆಗಿ ತವರಿಗೆ ಮರಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿರುಗಾಳಿಯಿಂದಾಗಿ 70 ಕ್ಕೂ ಹೆಚ್ಚು ಮಂದಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಇಂತಹ ವಿಪತ್ತಿನ ಸಂದರ್ಭದಲ್ಲೂ ರಾಜ್ಯದ ಮುಖ್ಯಮಂತ್ರಿ ಎನಿಸಿಕೊಂಡವರು ಇನ್ನೊಂದು ರಾಜ್ಯದ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ ಎಂದು ವಿಪಕ್ಷಗಳು ಟೀಕೆ ಮಾಡಿದ್ದವು.
ಈ ಹಿನ್ನಲೆಯಲ್ಲಿ ಚುನಾವಣೆ ಪ್ರಚಾರ ಅರ್ಧಕ್ಕೇ ಮೊಟಕುಗೊಳಿಸಿ ಯೋಗಿ ತವರಿಗೆ ಮರಳಿದ್ದಾರೆ. ಅಲ್ಲದೆ, ಬಿರುಗಾಳಿಯಿಂದಾಗಿ ತೊಂದರೆಗೀಡಾದವರ ಕುಟುಂಬದವರನ್ನು ಭೇಟಿ ಮಾಡಲಿದ್ದಾರೆ. ಇಂದಿನವರೆಗೂ ಸಿಎಂ ಯೋಗಿ ರಾಜ್ಯದಲ್ಲಿ ಚುನಾವಣಾ ಪ್ರಚಾರ ಮಾಡಬೇಕಿತ್ತು. ಆದರೆ ದುರ್ಘಟನೆಯಿಂದಾಗಿ ನಿನ್ನೆ ರಾತ್ರಿಯೇ ಉತ್ತರ ಪ್ರದೇಶಕ್ಕೆ ಮರಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.