Publish Date: Fri, 06 Jul 2018 (09:27 IST)
Updated Date: Fri, 06 Jul 2018 (09:29 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ತಮ್ಮ ಬಜೆಟ್ ನಲ್ಲಿ ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ಕೊಡುಗೆ ನೀಡದೇ ಇರುವುದನ್ನು ವಿರೋಧಿಸಿ ಇಲ್ಲಿನ ಬಿಜೆಪಿ ಶಾಸಕರು ಇಂದು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಿದ್ದಾರೆ.
ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಎದುರು ಉಡುಪಿ, ದ.ಕ. ಜಿಲ್ಲೆ, ಉತ್ತರ ಕರ್ನಾಟಕ ಜಿಲ್ಲೆಯ ಬಿಜೆಪಿ ಶಾಸಕರು ಸಿಎಂ ಧೋರಣೆ ವಿರೋಧಿಸಿ ಪ್ರತಿಭಟನೆ ನಡೆಸಲಿದ್ದಾರೆ. ಈ ಭಾಗದಲ್ಲಿ ಬಿಜೆಪಿ ಶಾಸಕರೇ ಅಧಿಕ ಸಂಖ್ಯೆಯಲ್ಲಿದ್ದಾರೆ ಎನ್ನುವುದು ಗಮನಾರ್ಹ.
ಇನ್ನು ಕರಾವಳಿಯನ್ನು ನಿರ್ಲಕ್ಷಿಸಿರುವ ಬಗ್ಗೆ ಕಾಂಗ್ರೆಸ್ ಶಾಸಕರಲ್ಲೂ ಅಸಮಾಧಾನವಿದ್ದು, ಬಹುಶಃ ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ಈ ಬಗ್ಗೆ ಸಿಎಂ ವಿರುದ್ಧ ಅಸಮಾಧಾನ ಹೊರ ಹಾಕುವ ಸಾಧ್ಯತೆಯಿದೆ. ಅಂತೂ ಕರಾವಳಿಯನ್ನು ನಿರ್ಲಕ್ಷಿಸಿದ್ದಕ್ಕೆ ಸಿಎಂ ಎಚ್ ಡಿಕೆಗೆ ಬಿಸಿ ಮುಟ್ಟಿಸುವ ಕೆಲಸವನ್ನು ಇಲ್ಲಿಯ ಭಾಗದ ಶಾಸಕರು ಮಾಡಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.