Daily Horoscope

Select Your Language

Notifications

webdunia
webdunia
webdunia
webdunia

ಕಲ್ಲಡ್ಕ ಪ್ರಭಾಕರ ಭಟ್ ಬಂಧಿಸಿದ್ರೆ ಕರಾವಳಿ ಹೊತ್ತಿ ಉರಿಯುತ್ತದೆ: ಪೋಸ್ಟ್ ವೈರಲ್

Kalladka Prabhakara Bhat
ಮಂಗಳೂರು: ಧ್ವೇಷ ಭಾಷಣ ಆರೋಪಕ್ಕೊಳಗಾಗಿರುವ ಆರ್ ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿದ್ರೆ ಕರಾವಳಿ ಹೊತ್ತಿ ಉರಿಯುತ್ತದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಗಳು ವೈರಲ್ ಆಗ್ತಿವೆ.

ಕಲ್ಲಡ್ಕ ಪ್ರಭಾಕರ ಭಟ್ ಕಾರ್ಯಕ್ರಮವೊಂದರಲ್ಲಿ ಮಹಿಳೆಯರ ಬಗ್ಗೆ ಅವಮಾನಕಾರೀ ಮಾತನಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಅವರನ್ನು ಬಂಧಿಸಿದರೆ ಕರಾವಳಿಯಲ್ಲಿ ಬೆಂಕಿ ಬೀಳುತ್ತದೆ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಎಚ್ಚರಿಕೆ ನೀಡುತ್ತಿದ್ದಾರೆ.

ಈ ನಡುವೆ ಕೋರ್ಟ್ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಯಾವುದೇ ತರಾತುರಿಯ ಕ್ರಮ ಕೈಗೊಳ್ಳದಂತೆ ನಿರ್ದೇಶನ ನೀಡಿದೆ. ಇನ್ನೊಂದೆಡೆ ಸ್ವತಃ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಧ್ವೇಷ ಭಾಷಣ ಮಾಡಿ ಶಾಂತಿಗೆ ಭಂಗ ತಂದರೆ ಯಾರೇ ಆಗಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.

ಇದರ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಪರವಾಗಿ ಮತ್ತು ವಿರೋಧವಾಗಿ ಪೋಸ್ಟ್ ಗಳು ಹರಿದಾಡುತ್ತಿವೆ. ಹಿಂದೂಗಳು ಮೂರು ಮಕ್ಕಳ  ಹೆರಬೇಕು ಎನ್ನುವ ಪ್ರಭಾಕರ ಭಟ್ ಗೆ ಎಷ್ಟು ಮಕ್ಕಳು ಎಂದು ಕೆಲವರು ವಿರೋಧವಾಗಿಯೂ ಪ್ರಶ್ನೆ ಮಾಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ