ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

Sampriya
ಭಾನುವಾರ, 19 ಅಕ್ಟೋಬರ್ 2025 (10:16 IST)
Photo Credit X
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಶನಿವಾರ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. 

ಮುಂದಿನ ನಾಲ್ಕು ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಅಕ್ಟೋಬರ್ 21 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.  

ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments