Publish Date: Tue, 04 Apr 2023 (14:42 IST)
Updated Date: Tue, 04 Apr 2023 (14:44 IST)
ಕಲಬುರಗಿ : ಬಿಜೆಪಿ ಪಕ್ಷದ ಚಿಹ್ನೆ ಹಾಗೂ ಜಿಲ್ಲಾಧ್ಯಕ್ಷನ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿದ್ದಕ್ಕಾಗಿ ಬಿಜೆಪಿ ಕಲಬುರಗಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ ಮೇಲೆ ಎಫ್ಐಆರ್ ದಾಖಲಾಗಿದೆ.
ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ನಡುವೆ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿದ ಶಿವರಾಜ್ ಪಾಟೀಲ್ ರದ್ದೇವಾಡಗಿ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.