ಕರಾವಳಿ ಬಿಜೆಪಿಯ 10 ಶಾಸಕರಿಗೆ ಕೊಕ್?

Webdunia
ಸೋಮವಾರ, 10 ಏಪ್ರಿಲ್ 2023 (15:15 IST)
ಬಿಜೆಪಿ ಟಿಕೆಟ್​ ಇಂದೇ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಬಿಜೆಪಿ ಹೈಕಮಾಂಡ್​ ಅಳೆದು ತೂಗಿ ಟಿಕೆಟ್​ ನೀಡುತ್ತಿದೆ.. ಅದರಲ್ಲೂ ಬಿಜೆಪಿ ಭದ್ರಕೋಟೆ ಕರಾವಳಿಯಲ್ಲಿ ಬಹುತೇಕ ‌ಶಾಸಕರಿಗೆ ಟಿಕೆಟ್​ ಕೈತಪ್ಪುವ ಆತಂಕ ಎದುರಾಗಿದೆ..10ಕ್ಕೂ ಹೆಚ್ಚು ಶಾಸಕರಿಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆಯಿದೆ.. ಆಡಳಿತ ವಿರೋಧಿ‌ ಅಲೆ, ಕಾರ್ಯಕರ್ತರ ವಿರೋಧ, ವೈಯಕ್ತಿಕ ವರ್ಚಸ್ಸು ಕೆಡಿಸಿಕೊಂಡವರಿಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆಯಿದೆ.. ಟಿಕೆಟ್​ ಕೈತಪ್ಪುವ ಶಾಸಕರನ್ನ ನೋಡುವುದಾದ್ರೆ, ಸುಳ್ಯದ ಶಾಸಕ S. ಅಂಗಾರ, ಪುತ್ತೂರು ಶಾಸಕ ಸಂಜೀವ್ ಮಠಂದೂರು, ಉಡುಪಿ ಶಾಸಕ ರಘುಪತಿ ಭಟ್, ಕಾಪು‌ ಶಾಸಕ ಲಾಲಾಜಿ ಮೆಂಡನ್, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿಗೆ ಟಿಕೆಟ್​ ಕೈತಪ್ಪುವ ಸಾಧ್ಯತೆಯಿದೆ.. ಇನ್ನು ಕುಂದಾಪುರದಲ್ಲಿ ಈಗಾಗಲೇ ಶಾಸಕ ಹಾಲಾಡಿ ಶ್ರೀನಿವಾಸ್​ ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದಾರೆ.. ಭಟ್ಕಳದಲ್ಲೂ ಹಾಲಿ ಶಾಸಕರ ವಿರುದ್ದ ಆಕ್ಷೇಪ ಕೇಳಿ ಬರುತ್ತಿದೆ.. ಕುಮಟಾದಲ್ಲಿ ಶಾಸಕ ದಿನಕರ ಶೆಟ್ಟಿ ವಿರುದ್ಧ ಆಡಳಿತ ವಿರೋಧಿ ಅಲೆ ಕೇಳಿಬರುತ್ತಿದೆ.. ಹೀಗೆ 10 ಶಾಸಕರಿಗೆ ಟಿಕೆಟ್​ ಕೈತಪ್ಪುವ ಸಾಧ್ಯತೆಯಿದ್ದು, ಸಂಘ ಪರಿವಾರದ ಕಾರ್ಯಕರ್ತರು, ಪಕ್ಷ ನಿಷ್ಠರು, ಯುವ ಮುಖಕ್ಕೆ ಮಣೆ ಹಾಕುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments