Select Your Language

Notifications

webdunia
webdunia
webdunia
webdunia

ಹಸಿದ ಹೊಟ್ಟೆಗೆ ತಣ್ಣಿರು ಬಟ್ಟೆಯೇ ಗತಿ!

ಹಸಿದ ಹೊಟ್ಟೆಗೆ ತಣ್ಣಿರು ಬಟ್ಟೆಯೇ ಗತಿ!
ಕೋಲಾರ , ಬುಧವಾರ, 25 ಮೇ 2022 (14:16 IST)
ಕೋಲಾರ : ಬಡವರ ಹಸಿವು ನೀಗಿಸಲು ಸರ್ಕಾರ ಕೊಡುತ್ತಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಜಿಲ್ಲೆಯ ಬಂಗಾರಪೇಟೆಯ ಕಾಳಸಂತೆಯಲ್ಲಿ ರಾಜಾರೋಷವಾಗಿ ಮಾರಾಟವಾಗುತ್ತಿದೆ.
 
ಮಾರಾಟವಾದ ಅಕ್ಕಿಯು ಅಕ್ರಮವಾಗಿ 15ಕ್ಕೂ ಹೆಚ್ಚು ರೈಸ್ ಮಿಲ್ಗಳನ್ನು ಸೇರುತ್ತಿವೆ. ಹಲವು ಬಾರಿ ದಾಳಿ ನಡೆದರೂ ದಂಧೆ ಮಾತ್ರ ನಿಂತಿಲ್ಲ. ಈ ಹಿಂದೆ ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ 2017ರಲ್ಲಿ ಟನ್ಗಟ್ಟಲೆ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದರು.  
 
ಕಳೆದ ವರ್ಷ ಪಿಆರ್ಎಸ್ ಆಗ್ರೋಟೆಕ್ ರೈಸ್ ಮಿಲ್ ಮೇಲೆ ದಾಳಿ ಮಾಡಿ, ಸುಮಾರು 8,497 ಕ್ವಿಂಟಾಲ್ನಷ್ಟು ಅಂದರೆ 1 ಕೋಟಿ 7 ಲಕ್ಷ ಮೌಲ್ಯದ ಅಕ್ರಮ ಪಡಿತರ ಅಕ್ಕಿಯನ್ನು ಹರಾಜು ಮಾಡಿದ್ದರು. 
 
ಕೋರ್ಟ್ ಆದೇಶದಂತೆ ಕೆಲ ರೈಸ್ಮಿಲ್ಗಳಿಗೆ ಬೀಗ ಹಾಕಲಾಗಿದೆ. ಆದರೂ ಕೆಲ ಮಿಲ್ ಮಾಲೀಕರು ಭಯಪಡದೇ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಖರೀದಿ ಮಾಡುತ್ತಿದ್ದಾರೆ.   
 
ಬಂಗಾರಪೇಟೆ ತಾಲೂಕಿನಲ್ಲಿ 14 ರೈಸ್ ಮಿಲ್ಗಳಿದ್ದು, 3 ಮಿಲ್ಗಳು ಸ್ಟಾಪ್ ಆಗಿವೆ. ಉಳಿದಂತೆ ಬಹುತೇಕ ಮಿಲ್ಗಳಲ್ಲಿ ಸರ್ಕಾರ ಬಡವರಿಗೆ ಕೊಡುವ ಅಕ್ಕಿಯೇ ಸಿಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಯುದ್ಧ : ಪುಟ್ಟ ರಾಷ್ಟ್ರ ವಶಕ್ಕೆ ತಿಣುಕಾಟ!