Publish Date: Mon, 09 May 2022 (09:35 IST)
Updated Date: Mon, 09 May 2022 (09:37 IST)
ಶಿವಮೊಗ್ಗ: ಪ್ರೀತಿಸುವಂತೆ ಹಿಂದೆ ಬಿದ್ದು ಕಾಟ ಕೊಡುತ್ತಿದ್ದ ನೆರೆಮನೆಯವ ಯುವಕನ ಕಾಟ ತಾಳಲಾರದೇ 21 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾಶ್ರೀ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೆರೆಮನೆಯ ಶಶಾಂತ್ ಎಂಬಾತ ಕಳೆದ ಕೆಲವು ಸಮಯದಿಂದ ಯುವತಿಯ ಹಿಂದೆ ಬಿದ್ದಿದ್ದ.
ಇದರಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಯುವತಿಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.