ಕಾಲೇಜು ಆರಂಭಕ್ಕೆ ಸಿದ್ಧತೆ, ವಿದ್ಯಾರ್ಥಿಗಳಿಗೆ ಲಸಿಕೀಕರಣ ಮುಗಿದ ನಂತರ ನಿರ್ಧಾರ ಎಂದ ಡಿಸಿಎಂ

Webdunia
ಸೋಮವಾರ, 12 ಜುಲೈ 2021 (20:51 IST)
ಹುಬ್ಬಳ್ಳಿ: ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳ ಆರಂಭಕ್ಕೆ ಸರಕಾರ ಇನ್ನೂ ಯಾವುದೇ ಚರ್ಚೆ ನಡೆಸಿಲ್ಲ. ಆದರೆ, ಭೌತಿಕ ತರಗತಿಗಳ ಆರಂಭಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. 
 
ಹುಬ್ಬಳ್ಳಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಲಸಿಕೆ ಕೊಡುವ ಕೆಲಸ ಭರದಿಂದ ಸಾಗುತ್ತಿದೆ. ಲಸಿಕೆ ಕಾರ್ಯ ಮುಗಿಯುತ್ತಿದ್ದಂತೆ ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು. 
 
ಕಾಲೇಜುಗಳನ್ನು ತೆರೆಯಲು ಸವಾಲುಗಳಿರುವುದು ನಿಜ. ಆದರೆ ಎಷ್ಟು ದಿನವೆಂದು ಹಾಗೇ ಇರಲು ಸಾಧ್ಯ? ಜೀವನ ಸಾಗುತ್ತಲೇ ಇರಬೇಕು. ಸುರಕ್ಷತೆಯ ಜತೆ ಜತೆಗೇ ಜೀವನ ಸಾಗುತ್ತಿರಬೇಕು. ಈ ನಿಟ್ಟಿನಲ್ಲಿ ಲಸಿಕೆ ಮಾತ್ರವೇ ಪರಿಹಾರ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು. 
 
ಮೂರನೇ ಅಲೆ ತಡೆಗೆ ಸಿದ್ಧತೆ 
 
ಸರಕಾರ ಎಲ್ಲೂ ಮೈಮರೆತಿಲ್ಲ. ಒಂದೆಡೆ ಲಸಿಕೀಕರಣದ ವೇಗ ಹೆಚ್ಚಿಸುತ್ತಲೇ ಇನ್ನೊಂದೆಡೆ ಆರೋಗ್ಯ ವ್ಯವಸ್ಥೆಯ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುತ್ತಿದೆ. ರಾಜ್ಯಾದ್ಯಂತ ಕೋವಿಡ್‌ ಸೋಂಕಿತರಿಗಾಗಿಯೇ 6,000 ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಪ್ರಮಾಣಲ್ಲಿ ವೈದ್ಯರು, ನರ್ಸುಗಳು, ಪ್ಯಾರಾ ಮೆಡಿಕಲ್‌ ಸಿಬ್ಬಂದಿ, ಗ್ರೂಪ್‌ ಡಿ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಪೈಕಿ 2,000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು ಡಾ.ಅಶ್ವತ್ಥನಾರಾಯಣ. 
 
ಜನಸಂಖ್ಯೆಯನ್ನು ತಡೆಯಬೇಕು 
 
ಜನಸಂಖ್ಯೆ ನಿಯಂತ್ರಣಕ್ಕಾಗಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸರಕಾರದ ʼಇಬ್ಬರು ಮಕ್ಕಳ ನೀತಿʼಯ ಬಗ್ಗೆ ಕೇಳಲಾದ ಪ್ರಶ್ನೆಗೆ, ಅಭಿವೃದ್ಧಿಗೆ ಪೂರಕವಾಗಿ ಜನಸಂಖ್ಯೆ ಪ್ರಮಾಣವನ್ನು ತಡೆಯಬೇಕಾಗಿದೆ. ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments