Publish Date: Wed, 22 Nov 2023 (19:49 IST)
Updated Date: Wed, 22 Nov 2023 (18:51 IST)
ಬೆಂಗಳೂರಿನ ಲುಲು ಮಾಲ್ನಲ್ಲಿ ನಡೆದಿದ್ದ ಲೈಂಗಿಕ ಕಿರುಕುಳ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಲೈಂಗಿಕ ಕಿರುಕುಳ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತುಂಬಿ ತುಳುಕುತ್ತಿದ್ದ ಮೆಟ್ರೋ ರೈಲಿನಲ್ಲಿ ವ್ಯಕ್ತಿಯೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದು ಕಿಡಿಗೇಡಿ ಕೃತ್ಯಕ್ಕೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.ಸಾರ್ವಜನಿಕರು ಕೂಡಲೇ ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.