ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

Sampriya
ಶನಿವಾರ, 14 ಫೆಬ್ರವರಿ 2026 (19:21 IST)
ಯಾದಗಿರಿ: ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಕ್ರೂಸರ್ ವಾಹನ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 3ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಯಾದಗಿರಿ ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಗ್ರಾಮದ ನಿವಾಸಿಗಳಾದ ರಾಮರೆಡ್ಡಿ (52), ಅವರ ಪತ್ನಿ ಮೇಘಾ (50) ಹಾಗೂ ರಾಮರೆಡ್ಡಿಯ ಅತ್ತೆ, ವಿಜಯಪುರ ಜಿಲ್ಲೆ ಮೂಲದ ಮಹಾದೇವಪ್ಪ (65) ಎಂದು ಗುರುತಿಸಲಾಗಿದೆ.

ಮೃತ ರಾಮರೆಡ್ಡಿ ಕುಟುಂಬಸ್ಥರು ಹಾಗೂ ಸಂಬಂಧಿಕರೊಂದಿಗೆ ಕ್ರೂಸರ್ ವಾಹನದಲ್ಲಿ ಯಾದಗಿರಿಯಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ನಿನ್ನೆ ಯಾದಗಿರಿ ನಗರದಲ್ಲಿ ಮೊಮ್ಮಗನ ಜವಳ ಕಾರ್ಯಕ್ರಮ ಮುಗಿಸಿಕೊಂಡು ಶ್ರೀಶೈಲಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಚಾಲಕ ನಿದ್ದೆ ಮಂಪರಿನಲ್ಲಿ ಇದ್ದ ಕಾರಣಕ್ಕೆ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಗಾಯಗೊಂಡ ಐವರು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019ರ ಪುಲ್ವಾಮಾ ದಾಳಿಯ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಹುಲ್ ಗಾಂಧಿ

ಸುಳ್ಳು ಹೇಳುವುದು ರಾಹುಲ್ ಗಾಂಧಿಯವರು ನೀತಿ: ಅಮಿತ್ ಶಾ ಆಕ್ರೋಶ

ಮೋದಿ ಸರ್ಕಾರ ಹತ್ತಿ ರೈತರಿಗೆ ಮೋಸ ಮಾಡಿದೆ: ರಾಹುಲ್ ಗಾಂಧಿ ಕಿಡಿ

ಡಿಕೆ ಶಿವಕುಮಾರ್‌ಗೆ ಕಪ್ಪು ಬಟ್ಟೆ ಪ್ರದರ್ಶನ, ಕಾರಣ ಏನ್‌ ಗೊತ್ತಾ

ಬಾಂಗ್ಲಾದೇಶ ಚುನಾವಣೆಯಲ್ಲಿ ಛಾಪು ಮೂಡಿಸಿದ ಬಿಜೆಪಿ, ಗೆದ್ದಿದ್ದೆಷ್ಟು ಗೊತ್ತಾ

ಮುಂದಿನ ಸುದ್ದಿ
Show comments