Webdunia - Bharat's app for daily news and videos

Install App

ರಂಗೇರಿದ ಚುನಾವಣಾ ಅಖಾಡ: 14 ರಂದು ಬೆಂಗಳೂರಿನಲ್ಲಿ ಮೋದಿ ರೋಡ್‌ ಶೋ

Sampriya
ಸೋಮವಾರ, 8 ಏಪ್ರಿಲ್ 2024 (14:02 IST)
ಬೆಂಗಳೂರು: ರಾಜ್ಯದ ಲೋಕಸಭಾ ಅಖಾಢ ರಂಗೇರುತ್ತಿದೆ. ಇದೀಗ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಎಂಟ್ರಿಯಾಗುತ್ತಿದೆ. ಇದೇ 14ರಂದು ಮೋದಿ ಅವರು ಬೆಂಗಳೂರಿನಲ್ಲಿ ಬಿಜೆಪಿ ಪರ ಮತಯಾಚನೆ ಮಾಡಲಿದ್ದಾರೆ.

 ಇದೇ 14 ರಂದು ಪ್ರಧಾನಿ ಮೋದಿ ಅವರು ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ ಮತ್ತು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಸಭೆ ಮತ್ತು ರೋಡ್‌ ಶೋ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿದೆ.

ಚಿಕ್ಕಬಳ್ಳಾಪುರದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಲಿದ್ದಾರೆ. ಆ ಬಳಿಕ ಅವರು ರಾಮನಗರ ಅಥವಾ ಚನ್ನಪಟ್ಟಣದಲ್ಲಿ ಈ ಎರಡರಲ್ಲಿ ಒಂದು ಕಡೆ  ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬ್ಯಾಟರಾಯನಪುರ ಮತ್ತು ಹೆಬ್ಬಾಳದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸುಮಾರು 10 ಕಿ.ಮೀ.ಗಳಷ್ಟು ದೂರ ರೋಡ್‌ ಶೋ ನಡೆಸುವ ಸಾಧ್ಯತೆ ಇದೆ. ಅಂದು ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯ ಬಿಸಿ ತಟ್ಟುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments