Webdunia - Bharat's app for daily news and videos

Install App

ಕಾಂಗ್ರೆಸ್ ಕಾರ್ಯಕರ್ತೆಗೆ ಅಶ್ಲೀಲ ಕಮೆಂಟ್ : ಬಿಜೆಪಿ, ಆರ್ ಎಸ್ ಎಸ್ ವಿರುದ್ಧ ದೂರು

Webdunia
ಭಾನುವಾರ, 9 ಆಗಸ್ಟ್ 2020 (19:12 IST)
ಬಿಜೆಪಿ ಸರಕಾರದ ವಿರುದ್ಧ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಕಾಂಗ್ರೆಸ್ ಕಾರ್ಯಕರ್ತೆಗೆ ಅಶ್ಲೀಲ ಕಮೆಂಟ್ ಗಳು ಬರುತ್ತಿವೆ.


ಬಿಜೆಪಿ ಸರ್ಕಾರದ ಒಂದು ವರ್ಷದ ಸಾಧನೆಗಳೇನು? ಎಂಬ ನನ್ನ ಒಂದೇ ಒಂದು ಫೇಸ್ ಬುಕ್ ಪೋಸ್ಟ್ ಗೆ ನನ್ನ ಮೇಲೆ ಅಶ್ಲೀಲ ಕಮೆಂಟ್‌ಗಳ ದಾಳಿ ಆರಂಭಿಸಿದ್ದಾರೆ. ಇದರ ಹಿಂದೆ ಬಿಜೆಪಿ ಮತ್ತು ಆರ್ ಎಸ್ಎಸ್ ಕೈವಾಡವಿದೆ ಎಂದು ಕೊಪ್ಪಳದ ಗಂಗಾವತಿಯ ಕಾಂಗ್ರೆಸ್ ಕಾರ್ಯಕರ್ತೆ ಶೈಲಜಾ ಹಿರೇಮಠ ಆರೋಪಿಸಿದ್ದಾರೆ.  

ನನ್ನ ಪೇಜ್ ನಲ್ಲಿ ‘ರಾಜ್ಯ ಬಿಜೆಪಿ ಒಂದು ವರ್ಷದ ಸಾಧನೆ ಏನು? ಒಬ್ಬರಿಗೆ ಒಂದೇ ಉತ್ತರದ ಅವಕಾಶ’ ಎಂದು ಮಾಡಿದ ಪೋಸ್ಟ್ ಗೆ ಕಮೆಂಟ್ ಮಾಡಲಾಗಿದೆ. ಮಹಿಳೆಯರು ಕಿವಿಯಿಂದ ಕೇಳಲು ಹಾಗೂ ಯಾರಿಗೂ ಹೇಳಲು ಆಗದ ಕೆಟ್ಟ ಪದ ಬಳಕ ಮಾಡಿ ಕಮೆಂಟ್ ಮಾಡಿದ್ದಾರೆ. ಇವರಿಗೆಲ್ಲ ಅಕ್ಕ- ತಂಗಿ,‌ ತಾಯಿ ಇದ್ದಾರೋ ಇಲ್ಲ ಎಂಬ ಅನುಮಾನ ಬರ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂಥ ಹತ್ತಾರು ಸಮಸ್ಯೆ ಎದುರಿಸಿಕೊಂಡು ಬೆಳೆದ ನಾನೇ ಸಾಕಷ್ಟು ನೋವು ಉಂಡಿದ್ದೇನೆ. ಈ ಕಮೆಂಟ್ ನೋಡಿ ನನಗೂ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ನೋವಾಗಿತ್ತು ಎಂದು ಭಾವುಕರಾಗಿ ಮಾತನಾಡಿದರು.
ಇವರ ಫೇಸ್ ಬುಕ್ ಪೇಜ್ ನೋಡಿದರೆ ಇವರೆಲ್ಲ ಬಿಜೆಪಿ ಮತ್ತು ಆರ್‌ಎಸ್ಎಸ್ ನವರು ಎಂಬುದು ಗೊತ್ತಾಗುತ್ತದೆ. ತೀರಾ ಅಶ್ಲೀಲವಾಗಿ, ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ 7 ಜನ ಸೇರಿದಂತೆ ಇತರರ ಮೇಲೆ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments