Publish Date: Wed, 27 Dec 2023 (18:01 IST)
Updated Date: Wed, 27 Dec 2023 (18:06 IST)
ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ತಮ್ಮ ಬಳಿ ಇರುವ ಸಾಕ್ಷ್ಯ ಹಾಗೂ ಮಾಹಿತಿಗಳನ್ನು ನೀಡುವಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ಏಕಸದಸ್ಯ ತನಿಖಾ ಆಯೋಗವು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿದಂತೆ ಐವರಿಗೆ ನೋಟಿಸ್ ಜಾರಿಗೊಳಿಸಿದೆ. ಇವರೆಲ್ಲರಿಗೂ ಬುಧವಾರ ಖುದ್ದು ಹಾಜರಾಗಿ ಅಥವಾ ವಕೀಲರ ಮೂಲಕ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.