Select Your Language

Notifications

webdunia
webdunia
webdunia
webdunia

ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್ ಗಳ ಉಗ್ರಾಣದ ಉದ್ಘಾಟನೆ ಮಾಡಿದ ಆಯುಕ್ತರು

ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್ ಗಳ ಉಗ್ರಾಣದ ಉದ್ಘಾಟನೆ ಮಾಡಿದ ಆಯುಕ್ತರು
bangalore , ಗುರುವಾರ, 2 ಫೆಬ್ರವರಿ 2023 (18:19 IST)
2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಗೆ ಬರುವ 7 ವಿಧಾನಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್ ಗಳ ಉಗ್ರಾಣಕ್ಕಾಗಿ ಸರ್ವೇ ನಂಬರ್ 77ಪಿಲ್ಲಹಳ್ಳಿ ಗ್ರಾಮ, ದಾಸನಪುರ ಹೋಬಳಿ, ಬೆಂಗಳೂರು ಉತ್ತರ ತಾ. ವ್ಯಾಪ್ತಿಯಲ್ಲಿ 2 ಎಕರೆ ಪ್ರದೇಶದಲ್ಲಿ ಸ್ಥಾಪಿಸಿರುವ ಕಟ್ಟಡದ ಉದ್ಘಾಟನೆಯನ್ನು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ನೆರವೇರಿಸಿದ್ದಾರೆ. ಇನ್ನು ಉದ್ಘಾಟನೆಯ ನಂತರ ಮಾತನಾಡಿದ ಅವರು  ಜಿಲ್ಲಾ ಚುನಾವಣಾ ಅಧಿಕಾರಿ-ಬೆಂಗಳೂರು ಇವರ ವ್ಯಾಪ್ತಿಯಲ್ಲಿ 4 ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳು ಬರಲಿದ್ದು,4 ಉಗ್ರಾಣಗಳ ಪೈಕಿ ಪಿಲ್ಲಹಳ್ಳಿ ಗ್ರಾಮದಲ್ಲಿ ಹೊಸದಾಗಿ ಬೆಂಗಳೂರು ನಗರ ಜಿಲ್ಲೆಯ ಉಗ್ರಾಣವನ್ನು ಸ್ಥಾಪಿಸಲಾಗಿದ್ದು .ಬೆಂಗಳೂರು ನಗರ ವ್ಯಾಪ್ತಿಗೆ ಯಲಹಂಕ, ಯಶವಂತಪುರ, ಬ್ಯಾಟರಾಯನಪುರ, ಮಹದೇವಪುರ, ದಾಸರಹಳ್ಳಿ, ಆನೇಕಲ್ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳು ಬರಲಿವೆ. ಉಗ್ರಾಣದ ಸ್ಥಳದಲ್ಲಿ ಅಗತ್ಯ ಸಿಸಿ ಟಿವಿ, ಪೊಲೀಸ್ ಭದ್ರತಾ ಸಿಬ್ಬಂದಿಯ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈಗಾಗಲೇ ಬಂದಿರುವ ಇವಿಎಂಗಳನ್ನು ಹಳೆಯ ಉಗ್ರಾಣದಲ್ಲಿ ಶೇಖರಿಸಿಟ್ಟಿದ್ದು, ಅದನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ಖುಷಿಯಲ್ಲಿ ಇದ್ದವರಿಗೆ ಶಾಕ್