Publish Date: Thu, 26 May 2022 (22:26 IST)
Updated Date: Thu, 26 May 2022 (22:29 IST)
ಜನತಾ ಜಲಧಾರೆ ಹಾಗೂ ಬ್ರಹ್ಮ ಕಳಸ ಪ್ರತಿಷ್ಠಾಪನೆ ವೇಳೆ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಹಾಗೂ ಎಲ್ಲ ಜಿಲ್ಲೆಗಳಿಗೂ ಸಮಗ್ರ ನೀರಾವರಿ ಕಲಿಸುವ ಸಂಕಲ್ಪ ಮಾಡಲಾಯಿತು. ಅದಕ್ಕೆ ಶಕ್ತಿ ಕೊಡು ತಾಯಿ ಎಂದು ಗಂಗಾ ಮಾತೆಯನ್ನು ಪ್ರಾರ್ಥನೆ ಮಾಡಿಕೊಂದಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಐದು ವರ್ಷಗಳ ಪೂರ್ಣ ಪ್ರಮಾಣದ ಸ್ವತಂತ್ರ ಸರಕಾರ ನೀಡಿದರೆ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. ಈ ಬಗ್ಗೆ ರಾಜಿ ಇಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಇದರ ಜತೆಗೆ, ಸರ್ವ ಜನರ ಹಿತಕ್ಕಾಗಿ ರೂಪಿಸಲಾಗಿರುವ ಪಂಚರತ್ನ ಕಾರ್ಯಕ್ರಮಗಳ ಜಾರಿಗೂ ಶಕ್ತಿ ಕೊಡು ತಾಯಿ ಎಂದು ಗಂಗಾ ಮಾತೆಯವರಲ್ಲಿ ಬೇಡಿಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.