ಕಾವೇರಿ ಹೋರಾಟ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಜೀವಭಯವಿದ್ದಲ್ಲಿ ಅಂತಹವರಿಗೆ ರಕ್ಷಣೆ ನೀಡಲು ಬದ್ಧವಾಗಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪಿನ ಕುರಿತಂತೆ ಮುಂದೇನು ಮಾಡಬೇಕು ಎನ್ನುವ ಬಗ್ಗೆ ವಿಚಾರ ನಡೆಸುತ್ತಿದ್ದೇವೆ. ಇಂದು ಸಂಜೆ ಸರ್ವಪಕ್ಷಗಳ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರತಿಭಟನೆ ನಡೆಸಲು ಯಾರು ಅಡ್ಡಿಪಡಿಸುವುದಿಲ್ಲ. ಆದರೆ, ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡುವುದು ಸರಿಯಲ್ಲ. ಕಾವೇರಿ ವಿವಾದವನ್ನು ಒಗ್ಗಟಿನಿಂದ ಮಾತ್ರ ಪರಿಹರಿಸಲು ಸಾಧ್ಯ ಎಂದು ಮನವಿ ಮಾಡಿದರು.
ಪ್ರತಿಭಟನಾಕಾರರು ಶಾಂತಿಯುತ ಪ್ರತಿಭಟನೆ ನಡೆಸಬೇಕು ಎಂದು ಮನವಿ ಮಾಡಿದ ಅವರು ಸುಪ್ರೀಂಕೋರ್ಟ್ ತೀರ್ಪಿನಿಂದ ನಮಗೂ ನೋವಾಗಿದೆ. ಮುಂಬರುವ ದಿನಗಳಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಕುರಿತಂತೆ ಮೇಲ್ಮನವಿ ಸಲ್ಲಿಸುವ ಕುರಿತಂತೆ ಚರ್ಚೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ