Publish Date: Mon, 10 Jul 2017 (13:35 IST)
Updated Date: Mon, 10 Jul 2017 (13:38 IST)
ಮಂಗಳೂರು ಭಾಗದಲ್ಲಿ ನಡೆದ ಹಿಂಸಾಚಾರದಲ್ಲಿ ಮತೀಯ ಶಕ್ತಿಗಳ ಕೈವಾಡವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದೆರೆಡು ತಿಂಗಳುಗಳಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಪಾಲ್ಗೊಂಡವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ವಾರ್ನಿಂಗ್ ನೀಡಿದ್ದೇನೆ ಎಂದರು.
ಕಾನೂನನ್ನು ಯಾರೇ ಕೈಗೆತ್ತಿಕೊಂಡರೂ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಪದೇ ಪದೇ ಅಪರಾಧಗಳಲ್ಲಿ ಭಾಗಿಯಾಗುವವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಮತೀಯ ಸಂಘಟನೆಗಳಲ್ಲಿರುವ ಗೂಂಡಾಗಳ ಚಲನವಲನಗಳ ಮೇಲೆ ನಿಗಾ ಇಡುವಂತೆ ಪೊಲೀಸ್, ಗುಪ್ತಚರ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.