Publish Date: Thu, 06 Sep 2018 (17:56 IST)
Updated Date: Thu, 06 Sep 2018 (18:01 IST)
ರಾಜ್ಯದ ಕಾಂಗ್ರೆಸ್ ನಲ್ಲಿ ಆಂತರಿಕವಾಗಿ ಮತ್ತೊಂದು ಘರ್ಷಣೆ ಸದ್ದಿಲ್ಲದೇ ಏರ್ಪಟ್ಟಿದೆ. ಮೂವರು ನಾಯಕರು ಮೇಲುಗೈಗಾಗಿ ಸಮರ ಮುಂದುವರಿಸಿದ್ದು, ಕಾಂಗ್ರೆಸ್ ಗೆ ನಷ್ಟವಾಗಲಿದೆ ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ.
ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸತೀಶ್ ಜಾರಕಿಹೊಳಿ, ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಸಮರ ಏರ್ಪಟ್ಟಿದೆ. ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಮೇಲುಗೈಗಾಗಿ ಈ ಸಮರ ನಡೆಯುತ್ತಿದ್ದು, ಇದರಿಂದ ಕಾಂಗ್ರೆಸ್ ಗೆ ನಷ್ಟವಾಗುವ ಲಕ್ಷಣಗಳು ಗೋಚರಿಸಿವೆ.
ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳಕರ ನಡುವೆ ನಡೆದಿರುವ ಘರ್ಷಣೆಯನ್ನು ಸರಿಪಡಿಸಲು ಕಾಂಗ್ರೆಸ್ ನಾಯಕರು ಯತ್ನಿಸುತ್ತಿದ್ದಾರೆ. ಆದರೆ ಆಂತರಿಕವಾಗಿ ಈ ಬೇಗುದಿ ಹೆಚ್ಚುತ್ತಲೇ ಸಾಗಿದೆ ಎನ್ನಲಾಗಿದೆ. ಇದರಿಂದ ಕಾಂಗ್ರೆಸ್ ನಾಯಕರು ಮತ್ತಷ್ಟು ಸಂಕಟ ಎದುರಿಸುವಂತಾಗಿದೆ.