ಗೋಕಾಕ್ ಕ್ಷೇತ್ರದ ಉಪ ಚುನಾವಣೆಗೆ ಜಾರಕಿಹೊಳಿ ಸಹೋದರರ ನಡುವೆ ಪೈಪೋಟಿ

ಮಂಗಳವಾರ, 17 ಸೆಪ್ಟಂಬರ್ 2019 (11:20 IST)
ಗೋಕಾಕ್ : ಗೋಕಾಕ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಜಾರಕಿಹೊಳಿ ಸಹೋದರರ ನಡುವೆ ಪೈಪೋಟಿ ಏರ್ಪಟ್ಟಿದೆ.
ಗೋಕಾಕ್ ವಿಧಾನಸಭೆ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ  ಅನರ್ಹ ಶಾಸಕರು ಎಂದು ಘೋಷಿಸ್ಪಟ್ಟ ಹಿನ್ನಲೆಯಲ್ಲಿ  ರಮೇಶ್ ಜಾರಕಿಹೊಳಿ ಸುಪ್ರೀಂ ಕೋರ್ಟ್ ಆದೇಶದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಇದೀಗ ಆ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಲಖನ್ ಜಾರಕಿಹೊಳಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಲು ಸತೀಶ್ ಜಾರಕಿಹೊಳಿ ಪ್ರಯತ್ನ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ಹಿನ್ನಲೆಯಲ್ಲಿ ಈಗಾಗಲೇ ದೆಹಲಿಯಲ್ಲಿ ಬೀಡಿಬಿಟ್ಟಿರುವ ಸತೀಶ್ ಜಾರಕಿಹೊಳಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಗೋಕಾಕ್ ಕ್ಷೇತ್ರದಲ್ಲಿ ಲಖನ್ ಜಾರಕಿಹೊಳಿ ಗೆ ಟಿಕೆಟ್ ನೀಡುವುದರಿಂದ ಕಾಂಗ್ರೆಸ್ ಗೆ ಆಗುವ ಲಾಭದ ಬಗ್ಗೆ ಹಾಗೂ  ನೆರೆ, ಪ್ರವಾಹದ ವೇಳೆ ಲಖನ್ ಜಾರಕಿಹೊಳಿ ಮತ್ತು ತಾನು ಜನರಿಗೆ ನೀಡಿದ ನೆರವಿನದ ಬಗ್ಗೆ ಕೆ.ಸಿ. ವೇಣುಗೋಪಾಲ್ ಗೆ ವಿವರಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದು ಹೇಗೆ ಗೊತ್ತಾ?