Publish Date: Sun, 21 Apr 2019 (13:05 IST)
Updated Date: Sun, 21 Apr 2019 (13:06 IST)
ಹಾವೇರಿ : ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಪತ್ನಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ದೂರು ದಾಖಲಾಗಿದೆ.
ಮುಖವೇ ಸರಿ ಇಲ್ಲದ್ದಕ್ಕೆ ಅವರ ಪತ್ನಿಯೇ ಮೋದಿ ಬಿಟ್ಟು ಹೋಗಿದ್ದಾರೆ. ಹೀಗಿದ್ದೂ ಮೋದಿ ಮುಖ ನೋಡಿ ತಮಗೆ ಮತ ನೀಡಿ ಎಂದು ರಾಜ್ಯ ಬಿಜೆಪಿ ನಾಯಕರು ಕೇಳುತ್ತಿದ್ದಾರೆ. ಈಗ ಪತ್ನಿಯೇ ಬಿಟ್ಟು ಹೋಗಿರುವವರ ಮುಖ ನೋಡಿ ನಾವು ಮತ ಹಾಕಬೇಕೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದರು.
ದೇಶದ ಪ್ರಧಾನಿ ಬಗ್ಗೆ ಈ ರೀತಿ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಆಕ್ರೋಶಗೊಂಡ ಬಿಜೆಪಿ ಮುಖಂಡರು ಜಮೀರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.