Publish Date: Fri, 07 Apr 2023 (18:50 IST)
Updated Date: Fri, 07 Apr 2023 (18:45 IST)
ನಗರಸಭೆ ಅಧ್ಯಕ್ಷರ ವಿರುದ್ದ ದೂರು ದಾಖಲಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಮಾಹಿತಿ ನೀಡಿದ್ದು, ನಗರಸಭೆ ಅಧ್ಯಕ್ಷ ವರಸಿದ್ದಿ ವೇಣಿಗೋಪಾಲ್ ವಿರುದ್ದ ನಗರ ಸಭೆಯ ಸದಸ್ಯ ಕುಮಾರ್ ಗೌಡ ಎಂಬುವವರು ದೂರು ನೀಡಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಅಡಿಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಕೆ. ಎನ್ ರಮೇಶ್, ನಗರಸಭೆ ಅಧ್ಯಕ್ಷರು ಕಛೇರಿಯಲ್ಲಿ ಸಭೆ ಹಮ್ಮಿಕೊಂಡಿರುವ ಬಗ್ಗೆ ದೂರು ದಾಖಲಾಗಿರುವ ಕಾರಣ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ ಅವರ ಕಚೇರಿಯ CCTV ದೃಶ್ಯಾವಳಿ ನೋಡಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.