Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನ ಪೊಲೀಸ್‌ ಠಾಣೆಗೆ ದೂರು, ಏನಿದು ಪ್ರಕರಣ ಗೊತ್ತ

Rahul Gandhi

Sampriya

ಬೆಂಗಳೂರು , ಶನಿವಾರ, 21 ಸೆಪ್ಟಂಬರ್ 2024 (18:00 IST)
ಬೆಂಗಳೂರು: ಅಮೆರಿಕ ಪ್ರವಾಸ ವೇಳೆ ದೇಶದಲ್ಲಿರುವ ಮೀಸಲಾತಿ ಬಗ್ಗೆ ಹೇಳಿಕೆ ನೀಡಿದ ಸಂಬಂಧ ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ನಾಯಕರು ದೂರು ನೀಡಿದ್ದಾರೆ.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜಕುಮಾರ್ ಪಾಟೀಲ್, ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ವಸಂತಕುಮಾರ್​ ಸೇರಿ ಬಿಜೆಪಿ ನಾಯಕರು ಹೈಗ್ರೌಂಡ್ಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆ ಹೀಗಿದೆ:  'ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ವ್ಯವಸ್ಥೆಯ ರದ್ದತಿ ಕುರಿತು ಕಾಂಗ್ರೆಸ್‌ ಪಕ್ಷ ಚಿಂತಿಸಲಿದೆ' ಎಂದು ಹೇಳಿದ್ದರು. ಆದರೆ ಈ ಬಗ್ಗೆ ಮತ್ತೇ ಸ್ಪಷ್ಟನೆ ನೀಡಿದ ರಾಹುಲ್‌ಗಾಂಧಿ ಅವರು, ನಾನು ಮೀಸಲಾತಿಗೆ ವಿರುದ್ಧವಾಗಿ ಇದ್ದೇನೆ ಎಂಬಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಮೀಸಲಾತಿ ಮಿತಿಯನ್ನು ನಾವು ಶೇ 50 ಮೀರಿ ವಿಸ್ತರಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.

ಇನ್ನೂ ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಬಿಜೆಪಿ ಭಾರೀ ಆಕ್ರೋಶ ಹೊರಹಾಕಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರ ಇಂತಹ ನಿಲುವು ಅವರ ಸಂವಿಧಾನ ವಿರೋಧಿ ಮನಃಸ್ಥಿತಿ ತೋರಿಸುತ್ತದೆ ಎಂದು ಉಪ ರಾಷ್ಟ್ರಪತಿ ಜಗದೀಪ್‌ ಧನ್‌ಕರ್ ಅವರು ಸಹ ರಾಹುಲ್‌ ಗಾಂಧಿ ಅವರನ್ನು ಟೀಕಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿ ಮುಖ್ಯಮಂತ್ರಿಯಾಗಿ ಆತಿಶಿ ಮರ್ಲೇನಾ ಪ್ರಮಾಣ ವಚನ ಸ್ವೀಕಾರ