Select Your Language

Notifications

webdunia
webdunia
webdunia
webdunia

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

EX MP Pratap Simha

Sampriya

ರಾಮನಗರ , ಸೋಮವಾರ, 1 ಡಿಸೆಂಬರ್ 2025 (18:41 IST)
ರಾಮನಗರ: ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಬಂಧ  ಎಸ್‌ಡಿಪಿಐ ಮುಖಂಡನ ಮೇಲೆ ರಾಮನಗರ ಟೌನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನ.23ರಂದು ಎಸ್‌ಡಿಪಿಐ ವತಿಯಿಂದ ನಡೆದಿದ್ದ ರಾಜ್ಯೋತ್ಸವ ಕಾರ್ಯಕ್ರದಲ್ಲಿ ಎಸ್‌ಡಿಪಿಐ ರಾಜ್ಯ ಸಂಚಾಲಕ ಮೌಲಾನಾ ನೂರುದ್ದೀನ್ ಅವರು, ಪ್ರತಾಪ್ ಸಿಂಹ ಹಾಗೂ ಯತ್ನಾಳ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ವಿವಾದಾತ್ಮಕ ಹೇಳಿಕೆ ನೀಡಿದ ವಿಡಿಯೋ ಸಾಮಾಜಿಕ ಜಾಳತಾಣದಲ್ಲಿ ವೈರಲ್ ಆಗಿತ್ತು. 

ಈ ಸಂಬಂಧ ಬಿಜೆಪಿ ಕಾರ್ಯಕರ್ತ ಸಿದ್ದರಾಜು ಎಂಬುವವರು ರಾಮನಗರ ಟೌನ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಅನ್ವಯ ಎಸ್‌ಡಿಪಿಐ ಸಂಚಾಲಕ ಮೌಲಾನಾ ನೂರುದ್ದೀನ್, ಜಿಲ್ಲಾಧ್ಯಕ್ಷ ಅಮ್ಜದ್ ಷರೀಫ್, ತಾಲೂಕು ಅಧ್ಯಕ್ಷ ಸುಲ್ತಾನ್ ಅಲಿಖಾನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೆನ್ನಲ್ಲೇ ಸಚಿವ ಮಹದೇವಪ್ಪ ಹೊಸ ಬಾಂಬ್