Publish Date: Thu, 08 Feb 2018 (09:51 IST)
Updated Date: Thu, 08 Feb 2018 (10:09 IST)
ಬೆಂಗಳೂರು: ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ವಿರುದ್ಧ ಬಿಜೆಪಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದೆ.ಇದರ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿಗರು ಈಶ್ವರಪ್ಪನವರ ವಿಡಿಯೋ ಒಂದನ್ನು ಹರಿಯಬಿಟ್ಟಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆಯಲು ರಮ್ಯಾ ಕಾಂಗ್ರೆಸ್ ಕಾರ್ಯರ್ತರಿಗೆ ಕರೆ ನೀಡುತ್ತಿರುವ ವಿಡಿಯೋ ಸಾಮಾಜಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನೇ ಇಟ್ಟುಕೊಂಡು ನಿನ್ನೆಯಿಡೀ ಬಿಜೆಪಿ ನಾಯಕರು ರಮ್ಯಾಗೆ ಟಾಂಗ್ ಕೊಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಗಾರವೊಂದರಲ್ಲಿ ಬಿಜೆಪಿ ನಾಯಕ ಈಶ್ವರಪ್ಪ ಸುಳ್ಳು ಹೇಳುವುದು ಹೇಗೆ ಎಂದು ಪಾಠ ಮಾಡುತ್ತಿರುವ ವಿಡಿಯೋವನ್ನು ಹರಿಯಬಿಟ್ಟಿದ್ದಾರೆ.
ಇದರಲ್ಲಿ ಈಶ್ವರಪ್ಪ ನಾವು ರಾಜಕಾರಣಿಗಳು ಸುಳ್ಳು ಹೇಳಲೇ ಬೇಕಾಗುತ್ತದೆ. ಯಾವುದೂ ಗೊತ್ತಿಲ್ಲ ಎಂದು ತೋರಿಸಿಕೊಳ್ಳಬಾರದು ಎಂದು ಕಾರ್ಯಕರ್ತರಿಗೆ ಸಲಹೆ ನೀಡುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ