Select Your Language

Notifications

webdunia
webdunia
webdunia
webdunia

ಹುಬ್ಬಳ್ಳಿ ಗಲಭೆ ಪ್ರಕರಣದ ದೂರು ವಾಪಸ್: ಸಿಎಂ ಸಿದ್ದರಾಮಯ್ಯ ಹೀಗಂದ್ರು

Chief Minister Siddaramaiah, Mysore Dasara 2024, Hubballi Clash Case

Sampriya

ಮೈಸೂರು , ಶುಕ್ರವಾರ, 11 ಅಕ್ಟೋಬರ್ 2024 (16:12 IST)
ಮೈಸೂರು: ರಾಜ್ಯದ ಜನತೆಗೆ ಮತ್ತೊಮ್ಮೆ ದಸರೆಯ ಶುಭಾಶಯಗಳು. ನಾಳೆ ಮೈಸೂರಿನಲ್ಲಿ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಸಾಗಲಿದೆ. ಹೆಚ್ಚಿನ ಜನ ಸೇರುವ ನಿರೀಕ್ಷೆಯಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ.

ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ, ಅಭಿಮಾನಿಗಳೂ ಇರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ. ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ.

ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವ ಸಂಪುಟದ ಉಪಸಮಿತಿಗಿರುತ್ತದೆ. ಗೃಹಸಚಿವರು ಈ ಉಪಸಮಿತಿಯ  ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಹುಬ್ಬಳ್ಳಿ ಗಲಭೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದಾಗ್ಯೂ ಈ ವಿಚಾರವಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ. ಬಿಜೆಪಿಯವರು ಕೇವಲ ಸುಳ್ಳು ವಿಚಾರಗಳ ಆಧರಿಸಿಯೇ ಹೋರಾಟ ಮಾಡುತ್ತಾರೆ. ಸತ್ಯದ ಪರವಾಗಿ ಅವರ ಹೋರಾಟ ಎಂದಿಗೂ ಕಾಣಸಿಗುವುದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ರಾಜ್ಯೋತ್ಸವದಂದು ಶಾಲೆಗಳು, ಕಂಪನಿಗಳಲ್ಲಿ ಕನ್ನಡ ಬಾವುಟ ಹಾರಾಟ ಕಡ್ಡಾಯ: ಡಿಕೆಶಿ