Daily Horoscope
✕

ಹುಬ್ಬಳ್ಳಿ ಗಲಭೆ ಪ್ರಕರಣದ ದೂರು ವಾಪಸ್: ಸಿಎಂ ಸಿದ್ದರಾಮಯ್ಯ ಹೀಗಂದ್ರು

Sampriya
ಶುಕ್ರವಾರ, 11 ಅಕ್ಟೋಬರ್ 2024 (16:12 IST)
ಮೈಸೂರು: ರಾಜ್ಯದ ಜನತೆಗೆ ಮತ್ತೊಮ್ಮೆ ದಸರೆಯ ಶುಭಾಶಯಗಳು. ನಾಳೆ ಮೈಸೂರಿನಲ್ಲಿ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಸಾಗಲಿದೆ. ಹೆಚ್ಚಿನ ಜನ ಸೇರುವ ನಿರೀಕ್ಷೆಯಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ.

ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ, ಅಭಿಮಾನಿಗಳೂ ಇರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ. ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ.

ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವ ಸಂಪುಟದ ಉಪಸಮಿತಿಗಿರುತ್ತದೆ. ಗೃಹಸಚಿವರು ಈ ಉಪಸಮಿತಿಯ  ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಹುಬ್ಬಳ್ಳಿ ಗಲಭೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದಾಗ್ಯೂ ಈ ವಿಚಾರವಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ. ಬಿಜೆಪಿಯವರು ಕೇವಲ ಸುಳ್ಳು ವಿಚಾರಗಳ ಆಧರಿಸಿಯೇ ಹೋರಾಟ ಮಾಡುತ್ತಾರೆ. ಸತ್ಯದ ಪರವಾಗಿ ಅವರ ಹೋರಾಟ ಎಂದಿಗೂ ಕಾಣಸಿಗುವುದಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೆಹರು ಅವರ ಜಾತ್ಯತೀತ, ಪ್ರಜಾಪ್ರಭುತ್ವ ಮತ್ತು ಸಮಾಜವಾದಿ ಚಿಂತನೆಗಳನ್ನು ಬಿಜೆಪಿ ವಿರೋಧಿಸುತ್ತಿದೆ: ಸಿದ್ದರಾಮಯ್ಯ

ಒಂದೆರಡು ದಿನಗಳಲ್ಲಿ ವಿವಿಧ ನಿಗಮ ಮಂಡಳಿಗಳಿಗೆ ನೇಮಕದ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

7 ಕಿಮೀ ಮೆಟ್ರೋ ಉದ್ಘಾಟನೆಗೆ ಮೋದಿನೇ ಬರಬೇಕಿತ್ತಾ: ಎಂಬಿ ಪಾಟೀಲ್ ವ್ಯಂಗ್ಯ

ರಾಮನಗರದಲ್ಲಿ ಹೈಡ್ರಾಮಾ: ನಿಖಿಲ್ ಕುಮಾರಸ್ವಾಮಿ ಭೇಟಿಗೂ ಮುನ್ನ ಮಾರಮ್ಮ ದೇಗುಲಕ್ಕೆ ಬೀಗ

ಸೋನಿಯಾ ಗಾಂಧಿ ವಿರುದ್ಧ ವಿವಾದಾತ್ಮಕ ಪೋಸ್ಟ್: ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧಎಫ್ಐಆರ್

ಮುಂದಿನ ಸುದ್ದಿ
Show comments