Publish Date: Fri, 12 Jan 2024 (18:46 IST)
Updated Date: Fri, 12 Jan 2024 (18:50 IST)
ಬೆಂಗಳೂರು : ಹೈಕಮಾಂಡ್‌ಗೆ ಕಾಂಗ್ರೆಸ್ ಕಾರ್ಯಕರ್ತರು ದೂರು ಸಲ್ಲಿಸಿದ್ದಾರೆ.. ಸಹಕಾರ ಸಚಿವ ಕೆ.ಎನ್.ರಾಜಣ್ಣ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಸ್ವಪಕ್ಷದ ಕಾರ್ಯಕರ್ತರೇ ದೂರು ನೀಡಿದ್ದಾರೆ. ಅಲ್ಲದೇ ಸಚಿವ ಕೆಎನ್ ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿದ್ದಾರೆ. ಸಚಿವ ಕೆಎನ್ ರಾಜಣ್ಣ ಅವರು ಪದೇ ಪದೇ ಎಐಸಿಸಿ ಅಧ್ಯಕ್ಷ, ಕೆಪಿಸಿಸಿ ಅಧ್ಯಕ್ಷರ ಆದೇಶದ ವಿರುದ್ಧ ಮಾತಾಡುತ್ತಿದ್ದಾರೆ.
ಸಚಿವ ಕೆಎನ್ ರಾಜಣ್ಣ ಅನಾವಶ್ಯಕವಾಗಿ ಡಿಸಿಎಂ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಕೆ.ಎನ್.ರಾಜಣ್ಣ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ. ಸಚಿವರ ಡಿನ್ನರ್ ಮೀಟಿಂಗ್ ಬಗ್ಗೆ ತಪ್ಪು ಸಂದೇಶವನ್ನು ರವಾನಿಸುತ್ತಿದೆ. ಕಾಂಗ್ರೆಸ್ ಪಕ್ಷ ಇಂತಹ ಚಟುವಟಿಕೆಗಳನ್ನು ಸಹಿಸಬಾರದು. ಸಂಪುಟದಿಂದ ಸಚಿವ ಕೆ.ಎನ್.ರಾಜಣ್ಣ ಅವರನ್ನು ಕೈಬಿಡುವಂತೆ ಒತ್ತಾಯಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಕೂಡ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದೆ ಎಂದು ಕಾಂಗ್ರೆಸ್ನ 10 ಕಾರ್ಯಕರ್ತರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.