Webdunia - Bharat's app for daily news and videos

Install App

ಹೈಕಮಾಂಡ್‌ಗೆ ಕಾಂಗ್ರೆಸ್ ಕಾರ್ಯಕರ್ತರ ದೂರು

geetha
ಶುಕ್ರವಾರ, 12 ಜನವರಿ 2024 (18:46 IST)
ಬೆಂಗಳೂರು : ಹೈಕಮಾಂಡ್‌ಗೆ ಕಾಂಗ್ರೆಸ್ ಕಾರ್ಯಕರ್ತರು ದೂರು ಸಲ್ಲಿಸಿದ್ದಾರೆ.. ಸಹಕಾರ ಸಚಿವ ಕೆ.ಎನ್​.ರಾಜಣ್ಣ ಮತ್ತು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಸ್ವಪಕ್ಷದ ಕಾರ್ಯಕರ್ತರೇ ದೂರು ನೀಡಿದ್ದಾರೆ. ಅಲ್ಲದೇ ಸಚಿವ ಕೆಎನ್​​ ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿದ್ದಾರೆ. ಸಚಿವ ಕೆಎನ್​ ರಾಜಣ್ಣ ಅವರು ಪದೇ ಪದೇ ಎಐಸಿಸಿ ಅಧ್ಯಕ್ಷ, ಕೆಪಿಸಿಸಿ ಅಧ್ಯಕ್ಷರ ಆದೇಶದ ವಿರುದ್ಧ ಮಾತಾಡುತ್ತಿದ್ದಾರೆ.

ಸಚಿವ ಕೆಎನ್​ ರಾಜಣ್ಣ ಅನಾವಶ್ಯಕವಾಗಿ ಡಿಸಿಎಂ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಕೆ.ಎನ್​.ರಾಜಣ್ಣ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ. ಸಚಿವರ ಡಿನ್ನರ್ ಮೀಟಿಂಗ್​ ಬಗ್ಗೆ ತಪ್ಪು ಸಂದೇಶವನ್ನು ರವಾನಿಸುತ್ತಿದೆ. ಕಾಂಗ್ರೆಸ್ ಪಕ್ಷ ಇಂತಹ ಚಟುವಟಿಕೆಗಳನ್ನು ಸಹಿಸಬಾರದು. ಸಂಪುಟದಿಂದ ಸಚಿವ ಕೆ.ಎನ್.ರಾಜಣ್ಣ ಅವರನ್ನು ಕೈಬಿಡುವಂತೆ ಒತ್ತಾಯಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಕೂಡ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದೆ ಎಂದು ಕಾಂಗ್ರೆಸ್​​ನ 10 ಕಾರ್ಯಕರ್ತರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments