ಮಹಿಳೆಯರಿಗೆ ಅಪಮಾನ ಅಪವಾದ: ಎಚ್ ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Krishnaveni K
ಸೋಮವಾರ, 15 ಏಪ್ರಿಲ್ 2024 (09:56 IST)
ಬೆಂಗಳೂರು: ಮಹಿಳೆಯರಿಗೆ ಅಪಮಾನ ಮಾಡಿದ ಆರೋಪದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿರುದ್ಧ ಟೀಕಿಸುವ ಭರದಲ್ಲಿ ಎಚ್ ಡಿ ಕುಮಾರಸ್ವಾಮಿ ಗ್ಯಾರಂಟಿ ಯೋಜನೆಗಳಿಂದಾಗಿ ಮಹಿಳೆಯರು ಹಾದಿ ತಪ್ಪುತ್ತಿದ್ದಾರೆ ಎಂದಿದ್ದರು. ಅವರ ಈ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕಾಂಗ್ರೆಸ್ ಇದೇ ವಿಚಾರವನ್ನಿಟ್ಟುಕೊಂಡು ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದಿದೆ.

ಈ ನಡುವೆ ಮಹಿಳಾ ಆಯೋಗ ಕುಮಾರಸ್ವಾಮಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿದೆ. ನಿಮ್ಮ ತಾಯಿಯೂ ಓರ್ವ ಹೆಣ್ಣು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಇದೀಗ ತಮ್ಮ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೇ ಕುಮಾರಸ್ವಾಮಿ ಸ್ಪಷ್ಟನೆಯನ್ನೂ ನೀಡಿದ್ದಾರೆ.

ನಾನು ಮಹಿಳೆಯರನ್ನು ಅವಮಾನ ಮಾಡಿಲ್ಲ. ಮುಗ್ದ ಮಹಿಳೆಯರನ್ನು ಹಾದಿ ತಪ್ಪಿಸುತ್ತಿದ್ದಾರೆ ಎಂದಷ್ಟೇ ಹೇಳಿದ್ದೆ. ನಾನು ಸಿಎಂ ಆಗಿದ್ದಾಗ ಮಹಿಳೆಯರಿಗೆ ಸಾಕಷ್ಟು ಅಭಿವೃದ್ಧಿ ಯೋಜನೆ ಜಾರಿಗೆ ತಂದಿದ್ದೇನೆ. ಮಹಿಳೆಯರ ಬಗ್ಗೆ ನಾನು ಕೇವಲವಾಗಿ ಮಾತನಾಡಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments