Publish Date: Sun, 28 Jun 2026 (18:17 IST)
Updated Date: Sun, 28 Jun 2026 (18:23 IST)
ಬೆಂಗಳೂರು: ಪಾನ್ ಮಸಾಲಾ, ಗುಟ್ಕಾ ಹಾಗೂ ಅಡಿಕೆ ಪದಾರ್ಥಗಳಲ್ಲಿ ಸ್ವಲ್ಪ ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಮಾಡಿರುವುದು ಕಂಡುಬಂದಿದ್ದು, ಇದನ್ನು ತಕ್ಷಣ ನಿಲ್ಲಿಸದಿದ್ದಲ್ಲಿ ಪಾನ್ ಮಸಾಲಾ ಹಾಗೂ ಗುಟ್ಕಾಗಳನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 'ನಶಾ ಮುಕ್ತ ಭಾರತ ಅಭಿಯಾನ'ದಲ್ಲಿ ಡಿಕೆಶಿ ಎಚ್ಚರಿಕೆ ನೀಡಿದರು.
ಮಾದಕದ್ರವ್ಯ ಮುಕ್ತ ಕರ್ನಾಟಕ ರೂಪಿಸುವುದು ಸರ್ಕಾರದ ಗುರಿಯಾಗಿದ್ದು, ಅದಕ್ಕಾಗಿ ನಾವು ನಿರಂತರವಾಗಿ ಕಠಿಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಇಂದು ನೀವೆಲ್ಲರೂ ಸೇರಿ ಹಮ್ಮಿಕೊಂಡಿರುವ ಈ ಸಮಾವೇಶ ಸ್ವಾಗತಾರ್ಹ. ವ್ಯಸನಮುಕ್ತ ನಾಳಿನ ಸುಂದರ ಕನಸನ್ನು ನನಸಾಗಿಸಲು ಶಿಕ್ಷಣ ಸಂಸ್ಥೆಗಳು, ಪೋಷಕರು ಮತ್ತು ನಾಗರಿಕರು ಒಟ್ಟಾಗಿ ಮುನ್ನಡೆಯಬೇಕೆಂದರು.
ಇದೇ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಬೆಳವಣಿಗೆಯ ಕುರಿತು ಮಾಹಿತಿ ನೀಡಿದ ಸಿಎಂ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಶೀಘ್ರದಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆಯ ನೂತನ ಹೈಟೆಕ್ ಕ್ಯಾಂಪಸ್‌ಗೆ ಸ್ಥಳಾಂತರಗೊಳ್ಳಲಿದೆ ಎಂದು ಪ್ರಕಟ ಮಾಡಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ