Webdunia - Bharat's app for daily news and videos

Install App

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

Sampriya
ಭಾನುವಾರ, 20 ಜುಲೈ 2025 (15:31 IST)
Photo Credit X
ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆಯಾಗಿ ಬಾಗಿನ ಅರ್ಪಿಸಿದರು. 

ಕಬಿನಿ ಮುಂಗಾರಿನಲ್ಲಿ ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಕಳೆದ ಜೂನ್ ಮೊದಲ ವಾರದಲ್ಲೇ ತುಂಬಿತ್ತು. ಅಣೆಕಟ್ಟೆಯ ಗರಿಷ್ಠ ಮಟ್ಟ 2,284 ಅಡಿ ಇದ್ದು, ಇಂದಿನ ಮಟ್ಟ 2,283.33 ಅಡಿ ಇತ್ತು. 15 ಸಾವಿರ ಕ್ಯೂಸೆಕ್ ಒಳಹರಿವಿತ್ತು.

ಬಾಗಿನ ಸಮರ್ಪಿಸಿ ನಾಡಿನ ಒಳಿತಿಗಾಗಿ ಹಿರಿಯ ನಾಯಕರು ಪ್ರಾರ್ಥನೆ ಸಲ್ಲಿಸಿದರು. ಸಚಿವ ಡಾ.ಹೆಚ್.ಸಿ ಮಹದೇವಪ್ಪ, ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಕಾಂಗ್ರೆಸ್‌ನ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಮೈಸೂರಿನ ಹೆಗ್ಗಡದೇವನಕೋಟೆ ಬಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದೆ. ಪ್ರತಿ ಬಾರಿಯು ಸಮೃದ್ಧ ಮಳೆಯಾಗಿ ಕಾವೇರಿ ನದಿ ಮೈದುಂಬಿ ಹರಿಯಲಿ, ಜಲಾಶಯಗಳ‌ ಒಡಲು ತುಂಬಿ ರೈತರು ಬಾಳ ಹಸನಾಗಲಿ‌ ಎಂದು ಪ್ರಾರ್ಥಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು. 

ಕಪಿಲಾ ನದಿಯು ಕಾವೇರಿಯ ಪ್ರಮುಖ ಉಪನದಿಯಾಗಿದ್ದು, 1.13 ಲಕ್ಷ ಹೆಕ್ಟೇರ್ ಭೂಮಿಗೆ ನೀರಾವರಿ ಒದಗಿಸುತ್ತದೆ. ಪ್ರತಿ ವರ್ಷದಂತೆ ಜಲಾಶಯ ತುಂಬಿದಾಗ ಬಾಗಿನ ಅರ್ಪಿಸಲಾಗಿದ್ದು, ರೈತರಿಗೆ ಒಳ್ಳೆಯದಾಗಲೆಂದು ಕಪಿಲಾ ಮಾತೆಗೆ ಪ್ರಾರ್ಥಿಸಲಾಗಿದೆ‌. ಜಲಾಶಯದ ಎದುರು ಬೃಂದಾವನ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments