Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಂಪೌಂಡ್ ಕುಸಿದು 8 ಮಂದಿ ಸಾವು

Bengaluru bowring hospital
Photo Credit: X
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಂಪೌಂಡ್ ಕುಸಿದು 8 ಮಂದಿ ಸಾವನ್ನಪ್ಪಿದ್ದಾರೆ.

ಇದ್ದಕ್ಕಿದ್ದಂತೆ ಇಂದು ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಬಳಿಯ ಕಂಪೌಂಡ್ ಕುಸಿದು ಬಿದ್ದಿದ್ದು 8 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಮೃತರೆಲ್ಲರೂ ಪಕ್ಕದಲ್ಲೇ ಬೀದಿ ವ್ಯಾಪಾರಿ ಮಾಡುತ್ತಿದ್ದವರು ಎನ್ನಲಾಗಿದೆ. ಅವಶೇಷದಡಿ ಇನ್ನಷ್ಟು ಜನ ಸಿಲುಕಿರುವ ಶಂಕೆಯಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಸಿಎಂ ಸಿದ್ದರಾಮಯ್ಯ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. 

ಕಾಂಪೌಂಡ್ ಗೋಡೆಯ ಪಕ್ಕದಲ್ಲೇ ಬೀದಿಬದಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳು ಮತ್ತು ಮಳೆಯಿಂದ ತಪ್ಪಿಸಿಕೊಳ್ಳಲು ಆಶ್ರಯ ಪಡೆದಿದ್ದವರ ಮೇಲೆ ಸೂಕ್ತ ನಿರ್ವಹಣೆ ಇಲ್ಲದ ಹಳೆಯ ಗೋಡೆ ಮಳೆಯಿಂದಾಗಿ ಕುಸಿದು ಬಿದ್ದದ್ದೇ ಈ ದುರ್ಘಟನೆಗೆ ಕಾರಣವೆಂದು ಹೇಳಲಾಗುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

Tamil nadu Exit Poll result live: ತಮಿಳುನಾಡು ವಿಧಾನಸಭೆ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ