Select Your Language

Notifications

webdunia
webdunia
webdunia
webdunia

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ
ಬೆಳಗಾವಿ , ಬುಧವಾರ, 20 ಅಕ್ಟೋಬರ್ 2021 (11:58 IST)
ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡುವ ಕುರಿತು ಕನ್ನಡಪರ ಸಂಘಟನೆಗಳ ಒತ್ತಾಯ ವಿಚಾರ ಗಮನಕ್ಕೆ ಬಂದಿದೆ.

ಈ ಬಗ್ಗೆ ಶೀಘ್ರವೇ ತಜ್ಞರ ಜೊತೆ ಚರ್ಚೆ ನಡೆಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಮೆರವಣಿಗೆಗಳ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದರು.
ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು 23ರಂದು ಬೆಳಗಾವಿಗೆ ಬಂದು ಕಿತ್ತೂರು ಚೆನ್ನಮ್ಮ ಉತ್ಸವದಲ್ಲಿ ಭಾಗಿಯಾಗುತ್ತೇನೆ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು; ಆಪ್ತರ ಆಗ್ರಹ