Select Your Language

Notifications

webdunia
webdunia
webdunia
webdunia

ಬೇಳೂರು ಗೋಪಾಲಕೃಷ್ಣ ನಡೆಗೆ ಖಂಡನೆ

ಬೇಳೂರು ಗೋಪಾಲಕೃಷ್ಣ ನಡೆಗೆ ಖಂಡನೆ
ಶಿವಮೊಗ್ಗ , ಶುಕ್ರವಾರ, 31 ಮಾರ್ಚ್ 2023 (18:00 IST)
ಶಿವಮೊಗ್ಗದ ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ಸಿಗರೇ ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ ಹೋನಗೊಡು ಅಭಿಮಾನಿ ಬಳಗದವರಿಂದ ಸಮಾಲೋಚನಾ ಸಭೆ ನಡೆಸಲಾಗಿದ್ದು, ಅರ್ಜಿ ಸಲ್ಲಿಸಿದ್ದವರಿಗೆಲ್ಲಾ ಕರೆದು ಸಭೆ ನಡೆಸಿ, ಆಯ್ಕೆಯಾದ ಅಭ್ಯರ್ಥಿಗೆ ಬೆಂಬಲಿಸುವಂತೆ ಹೇಳಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ರು. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನಡೆಗೆ ಇತರ ಕಾಂಗ್ರೆಸ್​​ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರನ್ನು ಬೇಳೂರು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಸಾಗರ ಕಾಂಗ್ರೆಸ್ಸಿಗರು ಬೇಸರ ಹೊರ ಹಾಕಿದ್ದಾರೆ.. ಬೇಳೂರು ನಮ್ಮ ಬಳಿ ಬಂದು ಅವರ ನಡವಳಿಕೆಯನ್ನು ಬದಲಾಯಿಸಿಕೊಳ್ಳಬೇಕು, ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನ ಒಂದುಗೂಡಿಸಿಕೊಂಡು ಹೋಗಬೇಕು ಎಂದು ಸಭೆಯಲ್ಲಿ ಕಾರ್ಯಕರ್ತರು, ಮುಖಂಡರು ಒಕ್ಕೊರಲಿನಿಂದ ಆಗ್ರಹಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಏ. 3ಕ್ಕೆ 100 ‘ಕೈ’ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ?