ಮಂಡ್ಯದಲ್ಲಿ ರಾಜ್ಯ ಸರ್ಕಾರದಿಂದ ಅಧಿಕಾರದ ದುರುಪಯೋಗವಾಗುತ್ತಿದೆ- ಸುಮಲತಾರಿಂದ ಆರೋಪ

ಸೋಮವಾರ, 25 ಮಾರ್ಚ್ 2019 (11:58 IST)
ಮಂಡ್ಯ : ಮಂಡ್ಯದಲ್ಲಿ ರಾಜ್ಯ ಸರ್ಕಾರದಿಂದ ಅಧಿಕಾರದ ದುರುಪಯೋಗವಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಪಕ್ಷೇತರ ಅಭ್ಯರ್ಥಿ ಸುಮಲತಾ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದ ಅವರು , ‘ಸರ್ಕಾರಿ ಇಲಾಖೆಗಳನ್ನು ತಮಗೆ ಬೇಕಾದಂತೆ ಬಳಸಿಕೊಳ್ತಿದ್ದಾರೆ. ಮಂಡ್ಯದಲ್ಲಿ ಮನೆಮನೆಗೆ ಹೋಗಿ ಹಣ ನೀಡುತ್ತಿದ್ದಾರೆ. ವಿವಿಧ ರೀತಿಯಲ್ಲಿ ಹಣದ ಆಮಿಷ ಒಡ್ಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

 

ಅಲ್ಲದೇ ‘ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ. ಆಡಳಿತ ಯಂತ್ರ ಸಂಪೂರ್ಣ ದುರ್ಬಳಕೆ ಆಗುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

ಮುಂದಿನ ಸುದ್ದಿ ನೀತಿ ಸಂಹಿತೆ ಉಲ್ಲಂಘನೆ ; ನಾಮಪತ್ರ ಸಲ್ಲಿಸುವ ದಿನವೇ ಪ್ರತಾಪ್ ಸಿಂಹ ವಿರುದ್ಧ ಎಫ್‍.ಐ.ಆರ್ ದಾಖಲು