Publish Date: Sun, 01 Mar 2026 (18:30 IST)
Updated Date: Sun, 01 Mar 2026 (18:36 IST)
ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಅವರು, ಇರಾನ್ ನ ಪರಮೋಚ್ಛ ನಾಯಕ ಆಯತೊಲ್ಲಾ ಖಮೇನಿ ಹತ್ಯೆಯನ್ನು ಖಂಡಿಸಿದ್ದಾರೆ. ಅದಲ್ಲದೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ದ್ವಂದ ನೀತಿಯ ವಿರುದ್ಧ ಕಿಡಿಕಾರಿದ್ದಾರೆ.
ಊರಗಡೂರಿನಲ್ಲಿ ಕೊಲೆಯಾದ ಬಾಲಕನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಖಮೇನಿ ಸಾವಿನ ಹಿನ್ನೆಲೆಯಲ್ಲಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಿದ್ದಾರೆ.
ಖಮೇನಿ ಸಾವು ಖಂಡನೀಯವಾದದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದೆಡೆ ಶಾಂತಿ ಮಂತ್ರ ಹೇಳುತ್ತಾ ಮತ್ತೊಂದೆಡೆ ಯುದ್ಧ ಮಾಡುತ್ತಿದ್ದಾರೆ. ಹೀಗೆ ದ್ವಂದ ನೀತಿ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಇರಾನ್ ಮೇಲೆ ಯುದ್ಧ ಆರಂಭವಾದ ಹಿನ್ನಲೆಯಲ್ಲಿ ರಾಜ್ಯದ ಕನ್ನಡಿಗರು ಸಿಲುಕಿಕೊಂಡಿದ್ಥಾರೆ. ಇನ್ನೂ ಕನ್ನಡಿಗರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ವಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಟೀಕೆ ಮಾಡುವುದೇ ವಿಪಕ್ಷ ಗಳ ಕೆಲಸ ಎಂದು ಹೇಳಿದರು.