Select Your Language

Notifications

webdunia
webdunia
webdunia
webdunia

ಶಾಸಕ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು: ನಾಳೆ ಜೈಲಿಂದ ಬಿಡುಗಡೆ

MLA Revanna

Sampriya

ಬೆಂಗಳೂರು , ಸೋಮವಾರ, 13 ಮೇ 2024 (18:58 IST)
ಬೆಂಗಳೂರು: ಮಹಿಳೆಯ ಅಪಹರಣದ ಪ್ರಕರಣದಲ್ಲಿ ಬಂಧನದಲ್ಲಿದ್ದ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ  ಕೋರ್ಟ್​ ಷರತ್ತು ಬದ್ಧ ಜಾಮೀನು ನೀಡಿದೆ.

ಇಂದು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಚ್​.ಡಿ ರೇವಣ್ಣವನ್ನು ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ಅದರಂತೆ ನಾಳೆ ರೇವಣ್ಣ‌ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ರೇವಣ್ಣ ಅವರಿಗೆ ಕೋರ್ಟ್‌ ನೀಡಿದ ಷರತ್ತು ಹೇಗಿದೆ:

    ಇಬ್ಬರ ಶ್ಯೂರಿಟಿಯೊಂದಿಗೆ 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚನೆ
    ಸಾಕ್ಷ್ಯಾಧಾರ ನಾಶಪಡಿಸಬಾರದು
    ಎಸ್‌ಐಟಿ ತನಿಖೆಗೆ ಸಹಕರಿಸಬೇಕು
    ಮಂಡ್ಯ ಜಿಲ್ಲೆಯ ಕೆ.ಆರ್.ನಗರ ತಾಲೂಕು ಪ್ರವೇಶಿಸುವಂತಿಲ್ಲ

ಎಸ್ಐಟಿ ಬಂಧನದ ಬಳಿಕ ಹೆಚ್‌.ಡಿ ರೇವಣ್ಣ ಅವರು ಜಾಮೀನಿಗಾಗಿ ಜನಪ್ರತಿನಿಧಿಗಳ ನ್ಯಾಯಾಲಯ ಮೊರೆ ಹೋಗಿದ್ದರು. ರೇವಣ್ಣ ಪರ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರು. ಇನ್ನು  ಎಸ್ಐಟಿ ಪರ ಎಸ್​ಎಸ್​ಪಿ ಜಾಯ್ನಾ ಕೊಥಾರಿ ಅವರು ವಾದ ಮಂಡಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ನೀತಿ ಸಂಹಿತೆ ಉಲ್ಲಂಘಣೆ: ಪ್ರಧಾನಿ ಮೋದಿ ವಿರುದ್ಧ ಸಲ್ಲಿಸಿದ ಮನವಿ ತಿರಸ್ಕರಿಸಿ ಹೈಕೋರ್ಟ್