ಶಾಸಕ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು: ನಾಳೆ ಜೈಲಿಂದ ಬಿಡುಗಡೆ

Sampriya
ಸೋಮವಾರ, 13 ಮೇ 2024 (18:58 IST)
ಬೆಂಗಳೂರು: ಮಹಿಳೆಯ ಅಪಹರಣದ ಪ್ರಕರಣದಲ್ಲಿ ಬಂಧನದಲ್ಲಿದ್ದ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ  ಕೋರ್ಟ್​ ಷರತ್ತು ಬದ್ಧ ಜಾಮೀನು ನೀಡಿದೆ.

ಇಂದು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಚ್​.ಡಿ ರೇವಣ್ಣವನ್ನು ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ಅದರಂತೆ ನಾಳೆ ರೇವಣ್ಣ‌ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ರೇವಣ್ಣ ಅವರಿಗೆ ಕೋರ್ಟ್‌ ನೀಡಿದ ಷರತ್ತು ಹೇಗಿದೆ:

    ಇಬ್ಬರ ಶ್ಯೂರಿಟಿಯೊಂದಿಗೆ 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಸೂಚನೆ
    ಸಾಕ್ಷ್ಯಾಧಾರ ನಾಶಪಡಿಸಬಾರದು
    ಎಸ್‌ಐಟಿ ತನಿಖೆಗೆ ಸಹಕರಿಸಬೇಕು
    ಮಂಡ್ಯ ಜಿಲ್ಲೆಯ ಕೆ.ಆರ್.ನಗರ ತಾಲೂಕು ಪ್ರವೇಶಿಸುವಂತಿಲ್ಲ

ಎಸ್ಐಟಿ ಬಂಧನದ ಬಳಿಕ ಹೆಚ್‌.ಡಿ ರೇವಣ್ಣ ಅವರು ಜಾಮೀನಿಗಾಗಿ ಜನಪ್ರತಿನಿಧಿಗಳ ನ್ಯಾಯಾಲಯ ಮೊರೆ ಹೋಗಿದ್ದರು. ರೇವಣ್ಣ ಪರ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರು. ಇನ್ನು  ಎಸ್ಐಟಿ ಪರ ಎಸ್​ಎಸ್​ಪಿ ಜಾಯ್ನಾ ಕೊಥಾರಿ ಅವರು ವಾದ ಮಂಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನಿಗೆ ಚಪ್ಪಲಿ ಹಾರದ ಮೆರವಣಿಗೆ: ಪೊಲೀಸ್ ಅಧಿಕಾರಿಗಳ ಅಮಾನತು

ದೆಹಲಿಯಲ್ಲಿ ವಾಯುಮಾಲಿನ್ಯಕ್ಕೆ ವೋಟ್ ಚೋರಿ ಕಾರಣ ಎಂದ ರಾಹುಲ್ ಗಾಂಧಿ ಟ್ರೋಲ್ video

ನಿವೃತ್ತ ಖಡಕ್‌ ಐಪಿಎಸ್ ಅಧಿಕಾರಿ ಶ್ರೀಲೇಖಾಗೆ ಒಲಿಯುತ್ತಾ ತಿರುವನಂತಪುರಂ ಬಿಜೆಪಿ ಮೇಯರ್‌ ಪಟ್ಟ

ಕೊರೋನಾ ಸಂದರ್ಭದಲ್ಲಿ ಉಚಿತ ಲಸಿಕೆ ಕೊಡಿಸಿದ್ದ ಶಾಮನೂರು ಶಿವಶಂಕರಪ್ಪ: ಸಿದ್ದರಾಮಯ್ಯ

ನರೇಗಾ ಯೋಜನೆಯ ಹೆಸರು ಬದಲಾವಣೆಗೆ ಹೊಸ ಮಸೂದೆ: ರಾಜಕೀಯ ಸಂಘರ್ಷಕ್ಕೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments