ಶ್ರೀಗಳ ಅಗಲಿಕೆಗೆ ರಾಜಕೀಯ ಗಣ್ಯರಿಂದ ಸಂತಾಪ

ಭಾನುವಾರ, 29 ಡಿಸೆಂಬರ್ 2019 (11:05 IST)
ಬೆಂಗಳೂರು : ಪೇಜಾವರ ಶ್ರೀಗಳು ವಿಧಿವಶರಾದ ಹಿನ್ನಲೆಯಲ್ಲಿ  ಶ್ರೀಗಳ ಅಗಲಿಕೆಗೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು 8 ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ ಶ್ರೀಗಳನ್ನು ಮಠಕ್ಕೆ ಕರೆತಂದು ಅಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ  ಅವರು ಕೊನೆಯುಸಿರೆಳೆದಿದ್ದಾರೆ.


ಶ್ರೀಗಳ ಅಗಲಿಕೆಗೆ ರಾಜಕೀಯ ಗಣ್ಯರಾದ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ, ಗೃಹ ಸಚನ ಬೊಮ್ಮಾಯಿ, ಕೆಎಸ್ ಈಸ್ವರಪ್ಪ, ಶೋಭಾ ಕರಂದ್ಲಾಜೆ, ರಘುಪತಿ ಭಟ್, ಸದಾನಂದ ಗೌಡ, ಕೇಂದ್ರ ಸಚಿವ ಅಮಿತ್ ಶಾ, ಡಿಸಿಎಂ ಲಕ್ಷ್ಮಣ್ ಸವದಿ, ಶ್ರೀರಾಮುಲು, ಮುಂತಾದವರು ಸಂತಾಪ ಸೂಚಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯಲಿದೆ ಶ್ರೀಗಳ ಅಂತ್ಯ ಸಂಸ್ಕಾರ