Publish Date: Mon, 20 Feb 2023 (17:42 IST)
Updated Date: Mon, 20 Feb 2023 (17:45 IST)
ಕನ್ನಡದ ಮೇರುಪ್ರತಿಭೆ ಎಸ್.ಕೆ.ಭಗವಾನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ಧರಾಮಯ್ಯ, ನಟಿ, ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ರಾಜಕೀಯ ಕ್ಷೇತ್ರದ ಅನೇಕ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಸಂತಾಪ ಸಂದೇಶಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಶ್ರೀ ಎಸ್. ಕೆ. ಭಗವಾನ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬವರ್ಗದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.