Publish Date: Wed, 20 Dec 2023 (17:42 IST)
Updated Date: Wed, 20 Dec 2023 (18:15 IST)
ಜ್ಞಾನವಾಪಿ ಮಸೀದಿ ಕಾಶಿ ವಿಶ್ವನಾಥ ಮಂದಿರಕ್ಕೆ ಸೇರಿದ್ದು. ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ. ಹೀಗಾಗಿ ದೇವಸ್ಥಾನ ಪುನರ್‌ಸ್ಥಾಪಿಸಲು ಅವಕಾಶ ನೀಡಬೇಕು ಎಂದು ಹಿಂದೂ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮಾನ್ಯ ಮಾಡಿದೆ.ಇನ್ನು 6 ತಿಂಗಳ ಒಳಗೆ ಸರ್ವೆ ನಡೆಸಿ ಇದು ಹಿಂದೂಗಳ ಮಂದಿರವೋ ಅಥವಾ ಮಸೀದಿಯೋ ಎಂದು ನಿರ್ಧರವಾಗಬೇಕು ಎಂದು ಕೋರ್ಟ್ ಸೂಚಿಸಿದೆ.