ಬೆಳಗಾವಿ: ಇಲ್ಲಿನ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ ಮೇಲೆ ನಡೆದ ಹಲ್ಲೆ ಪ್ರಕರಣ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ ಖಂಡಿಸಿ ಜನರು ಪ್ರತಿಭಟನೆ ಮಾಡುತ್ತಿದ್ದಾರೆ.
ಸದ್ಯ ಬೆಳಗಾವಿ ಗಡಿಯಲ್ಲಿ ದ್ವೇಷಮಯ ವಾತಾವರಣದಿಂದ ಕೂಡಿದ್ದು, ಈ ಹಿನ್ನೆಲೆ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸಾರಿಗೆ ಬಸ್ ಸಂಚಾರವನ್ನು ಮಹಾರಾಷ್ಟ್ರ ಸರ್ಕಾರ ಸ್ಥಗಿತಗೊಳಿಸಿದೆ.
ಏನಿದು ಪ್ರಕರಣ: ಮರಾಠಿ ಬರಲ್ಲ.. ಕನ್ನಡ ಮಾತಾಡಿ ಅಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದಾರೆ. ಮರಾಠಿಗರ ಈ ಪುಂಡಾಟಕ್ಕೆ ಕಂಡಕ್ಟರ್ ಕಣ್ಣೀರು ಹಾಕಿದ್ದರು. ಈ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ನಡುವೆ ಮಹಾರಾಷ್ಟ್ರ ಸರ್ಕಾರ ಕರ್ನಾಟಕಕ್ಕೆ ಬರುವ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತ ಮಾಡಲಾಗಿದೆ.
ಹೀಗಾಗಿ ಬೆಳಗಾವಿ ಗಡಿವರೆಗೂ ಮಾತ್ರ ಮಹಾರಾಷ್ಟ್ರ ಸಾರಿಗೆ ಬಸ್ಗಳು ಬರುತ್ತಿವೆ. ಆದರೆ ಕರ್ನಾಟಕದಿಂದ ಎಂದಿನಂತೆ ಮಹಾರಾಷ್ಟ್ರದ ವಿವಿಧ ಕಡೆಗೆ ರಾಜ್ಯದ ಸಾರಿಗೆ ಬಸ್ಗಳು ಸಂಚಾರ ಮಾಡುತ್ತಿವೆ.