Webdunia - Bharat's app for daily news and videos

Install App

ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಬಸ್ ಸ್ಥಗಿತ

Sampriya
ಶನಿವಾರ, 22 ಫೆಬ್ರವರಿ 2025 (18:10 IST)
Photo Courtesy X
ಬೆಳಗಾವಿ: ಇಲ್ಲಿನ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ ಮೇಲೆ ನಡೆದ ಹಲ್ಲೆ ಪ್ರಕರಣ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣ ಖಂಡಿಸಿ ಜನರು ಪ್ರತಿಭಟನೆ ಮಾಡುತ್ತಿದ್ದಾರೆ.

ಸದ್ಯ ಬೆಳಗಾವಿ ಗಡಿಯಲ್ಲಿ ದ್ವೇಷಮಯ ವಾತಾವರಣದಿಂದ ಕೂಡಿದ್ದು, ಈ ಹಿನ್ನೆಲೆ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸಾರಿಗೆ ಬಸ್ ಸಂಚಾರವನ್ನು ಮಹಾರಾಷ್ಟ್ರ ಸರ್ಕಾರ ಸ್ಥಗಿತಗೊಳಿಸಿದೆ.

ಏನಿದು ಪ್ರಕರಣ:  ಮರಾಠಿ ಬರಲ್ಲ.. ಕನ್ನಡ ಮಾತಾಡಿ ಅಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದಾರೆ. ಮರಾಠಿಗರ ಈ ಪುಂಡಾಟಕ್ಕೆ ಕಂಡಕ್ಟರ್ ಕಣ್ಣೀರು ಹಾಕಿದ್ದರು. ಈ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ನಡುವೆ ಮಹಾರಾಷ್ಟ್ರ ಸರ್ಕಾರ ಕರ್ನಾಟಕಕ್ಕೆ ಬರುವ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತ ಮಾಡಲಾಗಿದೆ.

ಹೀಗಾಗಿ ಬೆಳಗಾವಿ ಗಡಿವರೆಗೂ ಮಾತ್ರ ಮಹಾರಾಷ್ಟ್ರ ಸಾರಿಗೆ ಬಸ್​ಗಳು ಬರುತ್ತಿವೆ. ಆದರೆ ಕರ್ನಾಟಕದಿಂದ ಎಂದಿನಂತೆ ಮಹಾರಾಷ್ಟ್ರದ ವಿವಿಧ ಕಡೆಗೆ ರಾಜ್ಯದ ಸಾರಿಗೆ ಬಸ್​​ಗಳು ಸಂಚಾರ ಮಾಡುತ್ತಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments