ವಾಹನಗಳಿಗೆ ಸ್ಯಾನಿಟೈಸರ್ ಸಿಂಪಡಣೆ ವಿಚಾರವಾಗಿ ಗೊಂದಲ; ರಸ್ತೆಯ ಮೇಲೆ ಸಾಲುಗಟ್ಟಿ ನಿಂತ ವಾಹನ

ಶುಕ್ರವಾರ, 3 ಏಪ್ರಿಲ್ 2020 (10:32 IST)
ಚಾಮರಾಜನಗರ : ವಾಹನಗಳಿಗೆ ಸ್ಯಾನಿಟೈಸರ್ ಸಿಂಪಡಣೆ ವಿಚಾರವಾಗಿ ಗೊಂದಲ ಏರ್ಪಟ್ಟಿದ್ದ, ಹಿನ್ನಲೆಯಲ್ಲಿ ನೂರಾರು ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ.

ಕೇರಳದಿಂದ ರಾಜ್ಯಕ್ಕೆ ಬರುವ ವಾಹನಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲು ಚಾಮರಾಜನಗರ ಜಿಲ್ಲಾಡಳಿತದಿಂದ ಅರಣ್ಯ ಇಲಾಖೆಗೆ ಸೂಚನೆ ನೀಡಿದೆ. ಆದರೆ ಜಿಲ್ಲಾಡಳಿತ ಕ್ರಮಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಸ್ಯಾನಿಟೈಸರ್ ಮಾಡುವುದಕ್ಕೆ ಅಧಿಕಾರಿಗಳು ನಿರಾಕರಣೆ ಮಾಡಿದ್ದಾರೆ.

 

ಹೀಗಾಗಿ 3 ಗಂಟೆಯಿಂದ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ ಎಂಬುದಾಗಿ ತಿಳಿದುಬಂದಿದೆ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಮೈಸೂರಿನಲ್ಲಿ ಏ.14ರವರೆಗೆ ಬೇಕರಿ ವ್ಯಾಪಾರಕ್ಕೆ ಬ್ರೇಕ್- ಸಚಿವ ವಿ.ಸೋಮಣ್ಣ ಸೂಚನೆ